ದೇಶ

ಸೋಮನಾಥ್ ಭಾರ್ತಿ ತನಿಖೆಗೆ ಸಹಕರಿಸುತ್ತಾರೆಂಬ ನಿರೀಕ್ಷೆ ಇದೆ: ದೆಹಲಿ ಪೊಲೀಸ್

ಸೋಮನಾಥ ಭಾರ್ತಿ ಅವರು ಕೌಟುಂಬಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಸಹಕರಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ದೆಹಲಿ...

ಸೋಮನಾಥ್ ಭಾರ್ತಿ ತನಿಖೆಗೆ ಸಹಕರಿಸುತ್ತಾರೆಂಬ ನಿರೀಕ್ಷೆ ಇದೆ: ದೆಹಲಿ ಪೊಲೀಸ್
ಸೋಮನಾಥ ಭಾರ್ತಿ ಪತ್ನಿ ಲಿಪಿಕಾ ಮಿತ್ರಾ
Published On :

ನವದೆಹಲಿ: ಸೋಮನಾಥ ಭಾರ್ತಿ ಅವರು ಕೌಟುಂಬಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಸಹಕರಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಕಾನೂನು ಪ್ರಕಾರ ನಾವು ಕ್ರಮಕೈಗೊಳ್ಳುತ್ತಿದ್ದೇವೆ. ಇದಕ್ಕೆ ಸೋಮನಾಥ್ ಭಾರ್ತಿ ಅವರು ಸಹಕರಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಸೋಮನಾಥ್ ಭಾರ್ತಿ ಅವರು ಕಾನೂನಿಗೆ ತಲೆಬಾಗಬೇಕು ಹಾಗೇ, ತನಿಖೆ ಸಹಕರಿಸಬೇಕು ಎಂದು ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ಹೇಳಿದ್ದಾರೆ.

ಸೋಮನಾಥ ಭಾರ್ತಿ ಪತ್ನಿ ಲಿಪಿಕಾ ಮಿತ್ರಾ ಅವರು ಸೋಮನಾಥ್ ವಿರುದ್ಧ ಕೌಟುಂಬಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಭಾರ್ತಿ ಅವರನ್ನು ಬಂಧಿಸಲು ಶೋಧ ನಡೆಸಿದ್ದಾರೆ. ತಮ್ಮ ಬಂಧನ ವಿರುದ್ಧ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ದೆಹಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಜೊತೆಗೆ ಸೋಮನಾಥ್ ಭಾರ್ತಿ ಮನೆಯೊಳಗೆ ಮಾತ್ರವಲ್ಲದೆ ಸಾರ್ವಜನಿಕ ಪ್ರದೇಶಗಳಲ್ಲಿ ಲಿಪಿಕಾ ಮಿತ್ರಾ ಅವರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.