ನಿರುದ್ಯೋಗ ಸಮಸ್ಯೆ ಹೆಚ್ಚಲು ಉದ್ಯೋಗಸ್ಥ ಮಹಿಳೆ ಕಾರಣವಂತೆ!
ಛತ್ತೀಸ್ ಗಡ ಬಿಜೆಪಿ ಸರ್ಕಾರ ದೊಡ್ಡ ಪೇಚಿಗೆ ಸಿಲುಕಿದೆ. ಉದ್ಯೋಗಸ್ಥ ಮಹಿಳೆಯರು ನಿರುದ್ಯೋಗ ಹೆಚ್ಚಲು ಕಾರಣ ಎಂದು ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ.

ರಾಯ್ ಪುರ: ಛತ್ತೀಸ್ ಗಡ ಬಿಜೆಪಿ ಸರ್ಕಾರ ದೊಡ್ಡ ಪೇಚಿಗೆ ಸಿಲುಕಿದೆ. ಛತ್ತೀಸ್ ಗಡದ 10 ನೇ ತರಗತಿ ಪುಸ್ತಕದ ಪಠ್ಯದಲ್ಲಿ ಯಡವಟ್ಟು ಮಾಡಿದೆ. ಉದ್ಯೋಗಸ್ಥ ಮಹಿಳೆಯರು ನಿರುದ್ಯೋಗ ಹೆಚ್ಚಲು ಕಾರಣ ಎಂದು ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ.
ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಎಲ್ಲಾ ವಲಯಗಳಲ್ಲಿ ಮಹಿಳೆಯರು ಕೆಲಸ ಮಾಡುತ್ತಿರುವುದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದು ಪ್ರೌಢ ಶಿಕ್ಷಣ ಮಂಡಳಿ 10 ನೇ ತರಗತಿಗೆ ತಯಾರಿಸುವ ಪುಸ್ತಕದಲ್ಲಿ ಅಳವಡಿಸಿದೆ ಎಂದು ವರದಿಯೊಂದು ತಿಳಿಸಿದೆ.
ಶಾಲಾ ಶಿಕ್ಷಕಿಯೊಬ್ಬರು ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಪಠ್ಯ ಪುಸ್ತಕಗಳಲ್ಲಿ ಯಡವಟ್ಟಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2014 ರಲ್ಲಿ ಪಶ್ಚಿಮ ಬಂಗಾಳದ ಪಠ್ಯ ಪುಸ್ತಕಗಳಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರನ್ನು ಭಯೋತ್ಪಾದಕರು ಎಂದು ಮುದ್ರಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


