ಒವೈಸಿ- ಮೋಹನ್ ಭಾಗವತ್ ಕಂಬೈನ್ಡ್ ಚಿತ್ರ ಇಂಟರ್ ನೆಟ್ ನಲ್ಲಿ ವೈರಲ್
ಎಐಎಂಐಎಂ ಪಕ್ಷದ ಮುಖಂದ ಅಸಾವುದ್ದೀನ್ ಒವೈಸಿ ಹಾಗೂ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ವಿವಾದಾತ್ಮಕ ಚಿತ್ರಗಳು ಇಂಟರ್ ನೆಟ್ ನಲ್ಲಿ ವೈರಲ್ ಆಗಿದೆ.

ನವದೆಹಲಿ: ಬಿಹಾರ ಚುನಾವಣೆಯಲ್ಲಿ ಎಐಎಂಐಎಂ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಾಗಿದೆ ಎಂಬ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ಎಐಎಂಐಎಂ ಪಕ್ಷದ ಮುಖಂದ ಅಸಾವುದ್ದೀನ್ ಒವೈಸಿ ಹಾಗೂ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ವಿವಾದಾತ್ಮಕ ಚಿತ್ರಗಳು ಇಂಟರ್ ನೆಟ್ ನಲ್ಲಿ ವೈರಲ್ ಆಗಿದೆ.
ಇಬ್ಬರ ಕಂಬೈನ್ಡ್(ಸಂಯೋಜಿಸಿದ) ಚಿತ್ರವನ್ನು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ವಿವಾದಕ್ಕೀಡಾಗಿದೆ. ಈ ಇಬ್ಬರೂ ಧಾರ್ಮಿಕ ಮತಾಂಧತೆ ಪ್ರತಿನಿಧಿಗಳು ದೇಶದ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಅಸಾವುದ್ದೀನ್ ಒವೈಸಿ ಹಾಗೂ ಮೋಹನ್ ಭಾಗವತ್ ಅವರ ಚಿತ್ರವನ್ನು ಸ್ನೇಹಿತರೊಬ್ಬರು ಕಳಿಸಿದ್ದು ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಎಐಎಂಐಎಂ ಅಧ್ಯಕ್ಷ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಕಾಂಗ್ರೆಸ್ ನಾಯಕರು ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆರ್.ಎಸ್.ಎಸ್ ನಾಯಕರೊಂದಿಗೆ ಗಡ್ಡಧಾರಿ- ಸ್ಕಲ್ ಕ್ಯಾಪ್ ಹಾಕಿರುವ ಮುಸ್ಲಿಮ್ ನಾಯಕನ ಚಿತ್ರವನ್ನು ಹಾಕುವ ಮೂಲಕ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಕೋಮುವಾದಿ ಎಂದು ಆರೋಪಿಸಿರುವ ಅಸಾವುದ್ದೀನ್ ಒವೈಸಿ, ನನ್ನ ಚಿತ್ರ ಹಾಕಿರುವುದು ಮುಖ್ಯವಲ್ಲ, ಆದರೆ ಇದರಿಂದಾಗಿ ಮುಸ್ಲಿಮರಿಗೆ ಅವಮಾನವಾಗಿದೆ ಎಂದು ಒವೈಸಿ ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದ ಕೋಮುಗಲಭೆಗಳಿಂದ ದೇಶದ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟಾಗಲಿಲ್ಲವೇ ಎಂದು ಒವೈಸಿ ದಿಗ್ವಿಜಯ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


