ದೇಶ

ಸುಬ್ರಹ್ಮಣಿಯನ್ ಸ್ವಾಮಿಗೆ ಜೆಎನ್ ಯು ಉಪಕುಲಪತಿ ಸ್ಥಾನ?

ಅವರಿಗೆ ಜೆ.ಎನ್.ಯು ಉಪಕುಲಪತಿ ಸ್ಥಾನದ ಜವಾಬ್ದಾರಿ ತೆಗೆದುಕೊಳ್ಳಲು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಆಹ್ವಾನ ನೀಡಿದೆ.

ಸುಬ್ರಹ್ಮಣಿಯನ್ ಸ್ವಾಮಿಗೆ ಜೆಎನ್ ಯು ಉಪಕುಲಪತಿ ಸ್ಥಾನ?
ಸುಬ್ರಹ್ಮಣಿಯನ್ ಸ್ವಾಮಿ
Published On :

ನವದೆಹಲಿ: ಅವರಿಗೆ ಜೆ.ಎನ್.ಯು ವಿಶ್ವವಿದ್ಯಾನಿಲಯದ ಉಪಕುಲಪತಿ ಸ್ಥಾನದ ಜವಾಬ್ದಾರಿ ತೆಗೆದುಕೊಳ್ಳಲು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಆಹ್ವಾನ ನೀಡಿದೆ.

ಮಾಧ್ಯಮಗಳ ವರದಿಗಳ ಪ್ರಕಾರ ಕುಲಪತಿ  ಸುಬ್ರಹ್ಮಣಿಯನ್ ಸ್ವಾಮಿ ಷರತ್ತು ವಿಧಿಸಿದ್ದು ಷರತ್ತುಗಳನ್ನು ಪೂರೈಸಿದರೆ ಉಪಕುಲಪತಿ ಸ್ಥಾನವನ್ನು ಒಪ್ಪಿಕೊಳ್ಳುವುದಾಗಿ ಟ್ವೀಟ್ ಮಾಡಿದ್ದಾರೆ. ಆಹ್ವಾನದ ಬಗ್ಗೆ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಸುಬ್ರಹ್ಮಣಿಯನ್ ಸ್ವಾಮಿ ಅವರೊಂದಿಗೆ ಮಾತನಾಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಆದರೆ ಉಪಕುಲಪತಿ ವಿಷಯದ ಬಗ್ಗೆ ಅಧಿಕೃತ ಮಾತುಕತೆ ನಡೆದಿಲ್ಲ.

ಹಾಲಿ ಉಪಕುಲಪತಿ ಎಸ್.ಕೆ ಸೊಫೋರ್ ಮುಂದಿನ ವರ್ಷ ಜನವರಿಯಲ್ಲಿ ನಿವೃತ್ತರಾಗಲಿರುವ ಹಿನ್ನೆಲಯಲ್ಲಿ ಹೊಸ ಉಪಕುಲಪತಿಗಳಿಗಾಗಿ ಹುಡುಕಾಟ ನಡೆದಿದೆ. ಶೋಧನಾ ಸಮಿತಿ ಅಸ್ಥಿತ್ವಕ್ಕೆ ಬರುವುದಕ್ಕೂ ಮುನ್ನವೇ ಸುಗ್ರಹ್ಮಣಿಯನ್ ಸ್ವಾಮಿ ಅವರಿಗೆ ಉಪಕುಲಪತಿ ಹುದ್ದೆ ನೀಡುವ ಪ್ರಸ್ತಾವನೆ ಕೇಳಿಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.