ಒಆರ್‍ಒಪಿ ಅಧಿಸೂಚನೆ ವಿಳಂಬ
ಸಮಾನ ಹುದ್ದೆಗೆ ಸಮಾನ ಪಿಂಚಣಿ(ಒಆರ್‍ಒಪಿ) ಕುರಿತ ಸರ್ಕಾರದ ಅಧಿಕೃತ ಅಧಿಸೂಚನೆ ಹೊರಬೀಳಲು ಇನ್ನೂ ಒಂದು ತಿಂಗಳು ಕಾಯಬೇಕಾಗಬಹುದು ಎಂದು ರಕ್ಷಣಾ ಸಚಿವಾಲಯದ ಉನ್ನತ ಮೂಲಗಳು ಹೇಳಿವೆ...

ನವದೆಹಲಿ: ಸಮಾನ ಹುದ್ದೆಗೆ ಸಮಾನ ಪಿಂಚಣಿ(ಒಆರ್‍ಒಪಿ) ಕುರಿತ ಸರ್ಕಾರದ ಅಧಿಕೃತ ಅಧಿಸೂಚನೆ ಹೊರಬೀಳಲು ಇನ್ನೂ ಒಂದು ತಿಂಗಳು ಕಾಯಬೇಕಾಗಬಹುದು ಎಂದು ರಕ್ಷಣಾ ಸಚಿವಾಲಯದ ಉನ್ನತ ಮೂಲಗಳು ಹೇಳಿವೆ.
ತೀರಾ ವಿಸ್ಮೃತ ವ್ಯಾಪ್ತಿ ಹೊಂದಿರುವ ಈ ಕುರಿತ ಮಾಹಿತಿ ಮತ್ತು ಅಂತಿಮ ಅಂಕಿಅಂಶಗಳೊಂದಿಗೆ ಅಧಿಸೂಚನೆ ಸಿದ್ಧಪಡಿಸಲು ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕಾಗಬಹುದು ಎಂದಿರುವ ಮೂಲಗಳು, ಸರ್ಕಾರ ಅಧಿಕೃತ ಘೋಷಣೆ ಮಾಡಿದ್ದರೂ, ವಿವರ ಅಧಿಸೂಚನೆಗೆ ಇನ್ನೂ ಕನಿಷ್ಠ ಒಂದು ತಿಂಗಳಾದರೂ ಸಮಯ ಬೇಕಿದೆ ಎಂದು ಹೇಳಿವೆ. ಈ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಸರ್ಕಾರ ಒಆರ್‍ಒಪಿ ಯೋಜನೆ ಜಾರಿ ಸಂಬಂಧ ಅಧಿಕೃತ ಘೋಷಣೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


