ದೇಶ

ವ್ಯಾಪಂ ಹಗರಣ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಸಿಬಿಐ ದಾಳಿ

ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ ೪೦ ಕಡೆಗಳಲ್ಲಿ ಗುರುವಾರ ಸಿಬಿಐ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವ್ಯಾಪಂ ಹಗರಣ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಸಿಬಿಐ ದಾಳಿ
ವ್ಯಾಪಂ ಹಗರಣದ ವಿರುದ್ಧದ ಪ್ರತಿಭಟನೆಯ ಒಂದು ದೃಶ್ಯ
Published On :

ನವದೆಹಲಿ: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ ೪೦ ಕಡೆಗಳಲ್ಲಿ ಗುರುವಾರ ಸಿಬಿಐ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ದಾಳಿ ನಡೆಸಿದ ಪ್ರದೇಶಗಳಲ್ಲಿ ಭೋಪಾಲ್, ಇಂದೋರ್, ಉಜ್ಜೈನ್, ರೇವಾ, ಜಬಲ್ಪುರ, ಲಕನೌ ಮತ್ತು ಅಲ್ಲಹಾಬಾದ್ ಸೇರಿವೆ" ಎಂದು ಸಿಬಿಐ ಅಧಿಕಾರಿ ತಿಳಿಸಿದ್ದಾರೆ.

ಸಿಬಿಐ ಇಲ್ಲಿಯವರೆಗೂ ೮೩ ಎಫ್ ಐ ಆರ್ ಗಳನ್ನು ದಾಖಲಿಸಿದ್ದು, ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ೧೨ ಪ್ರಾಥಮಿಕ ತನಿಖೆಗಳನ್ನು ಪ್ರಾರಂಭಿಸಿದೆ.

ಮಧ್ಯಪ್ರದೇಶದ ನರ್ಕಾರಿ ಕಾಲೇಜು ಮತ್ತು ನೌಕರಿಗಳ ನೇಮಕಾತಿಯಲ್ಲಿ ನಡೆದ ಭಾರಿ ಅವ್ಯವಹಾರ ಹಾಗೂ ಇದಕ್ಕೆ ಸಂಬಧಿಸಿದಂತೆ ೪೦ ಜನ ಮೃತಪಟ್ಟಿರುವುದನ್ನು ಸಿಬಿಐ ತನಿಖೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.