ತೀಸ್ತಾ ಬಂಧನಕ್ಕೆ ಅವಕಾಶ ಕೊಡಿ: ಸಿಬಿಐ
ವಿದೇಶದಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಬಂಧನಕ್ಕೆ ಅವಕಾಶ ನೀಡಬೇಕು ಎಂದು ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ...

ನವದೆಹಲಿ: ವಿದೇಶದಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಬಂಧನಕ್ಕೆ ಅವಕಾಶ ನೀಡಬೇಕು ಎಂದು ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ತೀಸ್ತಾ ಜತೆಗೆ ಅವರ ಪತಿಯನ್ನೂ ಬಂಧಿಸಲು ಅವಕಾಶ ನೀಡಬೇಕು ಎಂದು ಸಿಬಿಐ ವಕೀಲರು ಕೋರಿದ್ದಾರೆ. ಪ್ರಕರಣ ಸಂಬಂಧ ನಡೆಯುತ್ತಿರುವ ತನಿಖೆಗೆ ತೀಸ್ತಾ ಸೆಟಲ್ವಾಡ್ ಮತ್ತು ಅವರ ಪತಿ ನೆರವು ನೀಡುತ್ತಿಲ್ಲ. ಹೀಗಾಗಿ ಪ್ರಕರಣ ಮುಂದಕ್ಕೆ ಸಾಗುತ್ತಿಲ್ಲ, ಅವರನ್ನು ಬಂಧಿಸಲು ಅನುವು ಮಾಡಿಕೊಡಿ ಎಂದು ಕೇಳಿದ್ದಾರೆ. ಇದರ ಜತೆಯಲ್ಲೇ ಬಾಂಬೆ ಹೈಕೋರ್ಟ್ ಆ.11 ರಂದು ತೀಸ್ತಾ ಮತ್ತು ಅವರ ಪತಿ ಜಾವೇದ್ ಆನಂದ್ ಅವರಿಗೆ ನಿರೀಕ್ಷಣಾ ಜಾಮೀನು ಕೊಟ್ಟದ್ದನ್ನೂ ಸಿಬಿಐ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


