ಅಲಹಾಬಾದ್ ನಲ್ಲಿ ಹೋರಾಟಗಾರ್ತಿ ಮೇಧಾ ಪಾಟ್ಕರ್ ಬಂಧನ
ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹಾಗೂ ಅವರ ಬೆಂಬಲಿಗರನ್ನು ಅಲಹಾಬಾದ್ ಪೊಲೀಸರು ಬಂಧಿಸಿದ್ದಾರೆ.,,

ಅಲಹಾಬಾದ್: ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹಾಗೂ ಅವರ ಬೆಂಬಲಿಗರನ್ನು ಅಲಹಾಬಾದ್ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ವಿದ್ಯುತ್ ಸ್ಥಾವರ ನಿರ್ಮಾಣಕ್ಕಾಗಿ ರೈತರ ಜಮೀನನ್ನು ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕರ್ಚಿ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿ ಪರಿಸ್ಥಿತಿ ಉದ್ವಿಘ್ನ ಗೊಂಡಿತ್ತು.
ಈ ವೇಳೆ ಕರ್ಚಿ ಗ್ರಾಮಕ್ಕೆ ಭೇಟಿ ನೀಡಲು ಮೇಧಾ ಪಾಟ್ಕರ್ ತೆರಳುತ್ತಿದ್ದ ವೇಳೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಗಲಭೆಗ್ರಸ್ತ ಹಳ್ಳಿಗೆ ಭೇಟಿ ನೀಡುವ ಮೊದಲು ಸ್ಥಳೀಯ ಜಿಲ್ಲಾಡಳಿತದ ಅನುಮತಿ ಪಡೆದಿಲ್ಲವೆಂಬ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಮೇಧಾ ಪಾಟ್ಕರ್ ಸೇರಿದಂತೆ 10 ಜನರನ್ನು ಬಂಧಿಸಿರುವ ಪೊಲೀಸರು ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


