ನೆಹರೂ 'ಥರ್ಡ್ ಕ್ಲಾಸ್ ಪಾಸ್', ಜೆಎನ್‌ಯು ವಿದ್ಯಾರ್ಥಿಗಳು,ಪ್ರಾಧ್ಯಾಪಕರು 'ನಕ್ಸಲರು': ಸುಬ್ರಹ್ಮಣ್ಯನ್ ಸ್ವಾಮಿ
ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್...

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರು ಥರ್ಡ್ ಕ್ಲಾಸ್ ಪಾಸ್' ಎಂದಿದ್ದ ಸ್ವಾಮಿ, ಈಗ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರನ್ನು ನಕ್ಸಲರು ಎಂದಿದ್ದಾರೆ.
'ವಿದ್ಯಾರ್ಥಿಗಳು ಮಾತ್ರ ಅಲ್ಲ, ಜೆಎನ್ ಯು ಪ್ರಾಧ್ಯಾಪಕರನ್ನು ನಾನು ನಕ್ಸಲರು' ಎಂದು ಕರೆಯುವುದಾಗಿ ಸ್ವಾಮಿ ವರದಿಗಾರರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.
ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯಕ್ಕೆ ಸುಭಾಶ್ಚಂದ್ರ ಬೋಸ್ ಅವರ ಹೆಸರನ್ನು ಇಡಬೇಕೆಂದು ಶಿಫಾರಸು ಮಾಡಿದ್ದೇವೆ. ಕಾರಣ ಬೋಸ್ ಒಬ್ಬ ಅತ್ಯುನ್ನತ ಶಿಕ್ಷಣ ಪಡೆದ ಸಾಧಕ; ಆದರೆ ನೆಹರೂ ಒಬ್ಬ ಥರ್ಡ್ ಕ್ಲಾಸ್ ಪಾಸ್ ವ್ಯಕ್ತಿ' ಎಂದು ಸ್ವಾಮಿ ಹೇಳಿದ್ದಾರೆ.
ವರದಿಗಳ ಪ್ರಕಾರ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಸ್ವಾಮಿ ಅವರಿಗೆ ಜೆಎನ್‌ಯು ಕುಲಪತಿ ಹುದ್ದೆ ನೀಡುವ ಸಾಧ್ಯತೆ ಇದೆ. ಆದರೆ ಸ್ವಾಮಿ ಅವರು ಈ ಹುದ್ದೆ ವಹಿಸಿಕೊಳ್ಳಲು ಕೆಲವು ಶರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


