ಸರ್ಕಾರಿ ಬಂಗ್ಲೆ ತೆರವುಗೊಳಿಸುವಂತೆ ವೀರಭದ್ರ ಸಿಂಗ್, ಫಾರೂಖ್ ಅಬ್ದುಲ್ಲಾಗೆ ಕೇಂದ್ರ ಸೂಚನೆ
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್, ಮಾಜಿ ಕೇಂದ್ರ ಸಚಿವ ಫಾರೂಖ್ ಅಬ್ದುಲ್ಲಾ ಹಾಗೂ ಕಾಂಗ್ರೆಸ್ ನಾಯಕ ದಿ.ಅರ್ಜುನ್ ಸಿಂಗ್ ಅವರ...

ನವದೆಹಲಿ: ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್, ಮಾಜಿ ಕೇಂದ್ರ ಸಚಿವ ಫಾರೂಖ್ ಅಬ್ದುಲ್ಲಾ ಹಾಗೂ ಕಾಂಗ್ರೆಸ್ ನಾಯಕ ದಿ.ಅರ್ಜುನ್ ಸಿಂಗ್ ಅವರ ಪತ್ನಿಗೆ ಸರ್ಕಾರಿ ಬಂಗಲೆ ತೆರವುಗೊಳಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
ವೀರಭದ್ರ ಸಿಂಗ್ ಅವರಿಗೆ ಮಂಜೂರು ಮಾಡಿದ್ದ ಮನೆಯನ್ನು ಕಳೆದ ಏಪ್ರಿಲ್‌ನಲ್ಲಿ ವಸತಿ ಕುರಿತ ಸಂಪುಟ ಸಮಿತಿ(ಸಿಸಿಎ) ರದ್ದುಗೊಳಿಸಿತ್ತು. ಆದರೂ ಸಿಂಗ್ ಮನೆ ಖಾಲಿ ಮಾಡಿರಲಿಲ್ಲ. ಹೀಗಾಗಿ ನಗರಾಭಿವೃದ್ಧಿ ಸಚಿವಾಲಯ ಈಗ ಮನೆ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ.
ನಗರಾಭಿವೃದ್ದಿ ಸಚಿವಾಲಯದ ಹಿರಿಯ ಅಧಿಕಾರಿಯ ಪ್ರಕಾರ, ಈ ಸಂಬಂಧ ವೀರಭದ್ರ ಸಿಂಗ್ ಅವರು ಎಸ್ಟೇಟ್ಸ್ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದು, ಬಂಗಲೆಯಲ್ಲಿ ಮುಂದುವರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕ ಅರ್ಜುನ್ ಸಿಂಗ್ ಅವರು 2011ರಲ್ಲಿ ಮೃತಪಟ್ಟ ನಂತರ ಅವರ ಪತ್ನಿ ಸರೋಜ್ ಅವರಿಗೆ 2016ರವರೆಗೆ ಸರ್ಕಾರಿ ಬಂಗಲೆಯಲ್ಲಿ ಮುಂದುವರೆಯಲು ಅವಕಾಶ ನೀಡಲಾಗಿತ್ತು. ಆದರೆ ಎನ್‌ಡಿಎ ಸರ್ಕಾರ ಅದನ್ನು ರದ್ದುಗೊಳಿಸಿ ಈಗ ಮನೆ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


