ಸಂಸದರ ವೇತನ, ಭತ್ಯೆ ಶಿಫಾರಸ್ಸಿಗೆ ಸಮಿತಿ ರಚನೆಗೆ ಮುಂದಾದ ಕೇಂದ್ರ ಸರ್ಕಾರ
ಸಂಸದರ ವೇತನ ಭತ್ಯೆ ಹೆಚ್ಚಳ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಲು ಮುಂದಾಗಿದೆ.

ನವದೆಹಲಿ: ಸಂಸದರ ವೇತನ ಭತ್ಯೆ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಲು ಮುಂದಾಗಿದೆ.
ಸಂಸದೀಯ ವ್ಯವಹಾರಗಳ ಸಚಿವಾಲಯ ಸಮಿತಿ ರಚನೆಗೆ ಸಲಹೆ ನೀಡಿದ್ದು, ಸಂಸದರ ವೇತನ ಹಾಗೂ ಭತ್ಯೆಗೆ ಸಂಬಂಧಿಸಿದ ಶಿಫಾರಸ್ಸಿಗೆ ತ್ರಿಸದಸ್ಯ ವೇತನ ಆಯೋಗ ರಚನೆಯಾಗಲಿದೆ. ಅಖಿಲ ಭಾರತ ವಿಪ್ಸ್ ಕಾನ್ಫರೆನ್ಸ್ ಗಾಗಿ ಸಚಿವಾಲಯದಿಂದ ಪ್ರಕಟವಾಗಿರುವ ಕಾರ್ಯಸೂಚಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ.
ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಚಿವಾಲಯದ ಪ್ರಕಟನೆ ತಿಳಿಸಿದೆ. ಆಂಧ್ರಪ್ರದೇಶದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಲವು ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ. ಶಾಸಕಾಂಗ ಸಂಸ್ಥೆಗಳು ಉತ್ತಮ ಕಾರ್ಯನಿರ್ವಹಣೆ ಮಾಡುವುದರ ಬಗ್ಗೆ ಈ ಸಮ್ಮೇಳನದಲ್ಲಿ ಚರ್ಚೆ ನಡೆಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


