ಯುಪಿಎಸ್ಸಿ ಪರೀಕ್ಷೆ ವ್ಯವಸ್ಥೆ ಬದಲಿಗೆ ಸಮಿತಿ
ಕೇಂದ್ರೀಯ ನಾಗರಿಕ ಸೇವಾ ಪರೀಕ್ಷೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ...

ನವದೆಹಲಿ: ಕೇಂದ್ರೀಯ ನಾಗರಿಕ ಸೇವಾ ಪರೀಕ್ಷೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿ ರಚಿಸಿದೆ.
ಪಠ್ಯಕ್ರಮ, ವಯೋಮಿತಿ ಸಡಿಲಿಕೆ, ಅರ್ಹತೆಗೆ ಸಂಬಂಧಿಸಿದ ಮಾಹಿತಿಯ ಅಧ್ಯಯನ ನಡೆಸಲಿದೆ. ಕೇಂದ್ರ ಸಿಬ್ಬಂದಿ ಖಾತೆ ಸಹಾಯಕ ಸಚಿವ ಡಾ.ಜಿತೇಂದ್ರ ಸಿಂಗ್ ಈ ಮಾಹಿತಿ ನೀಡಿದ್ದಾರೆ. ಈ ಸಮಿತಿ ನೀಡಿದ ವರದಿಯ ಆಧಾರದ ಹಿನ್ನೆಲೆಯಲ್ಲಿ ಪರೀಕ್ಷಾ ಕ್ರಮದಲ್ಲಿ ಬದಲು ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.
ವೈದ್ಯಕೀಯ, ಎಂಜಿನಿಯರಿಂಗ್, ಮಾನವಿಕ ವಿಭಾಗಗಳಿಂದ ಬರುವವರಿಗೆ ಅನುಕೂಲವಾಗಲಿದೆ. ವರದಿ ಸಲ್ಲಿಸುವವರೆಗೆ ಜನರಲ್ ಸ್ಟಡೀಸ್ ವಿಷಯದಲ್ಲಿ ಉತ್ತೀರ್ಣರಾಗಬೇಕು. ಪ್ರವೇಶ ಪರೀಕ್ಷೆಯಲ್ಲಿ ಶೇ.33 ಅಂಕ ಪಡೆಯಬೇಕೆಂಬ ನಿಯಮ ಜಾರಿಯಲ್ಲಿರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


