ದೇಶ

ಹಜ್ ಕಾಲ್ತುಳಿತದಲ್ಲಿ ಮೃತಪಟ್ಟ ಭಾರತೀಯರ ಸಂಖ್ಯೆ 45ಕ್ಕೆ ಏರಿಕೆ

ಮೆಕ್ಕಾದಲ್ಲಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಲ್ತುಳಿತ ದುರಂತದಲ್ಲಿ ಮೃತಪಟ್ಟ ಭಾರತೀಯ ಸಂಖ್ಯೆ 45ಕ್ಕೆ ಏರಿಕೆಯಾಗಿದೆ.

ಹಜ್ ಕಾಲ್ತುಳಿತದಲ್ಲಿ ಮೃತಪಟ್ಟ ಭಾರತೀಯರ ಸಂಖ್ಯೆ 45ಕ್ಕೆ ಏರಿಕೆ
(ಸಂಗ್ರಹ ಚಿತ್ರ)
Published On :

ಮೀನಾ: ಮೆಕ್ಕಾದಲ್ಲಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಲ್ತುಳಿತ ದುರಂತದಲ್ಲಿ ಮೃತಪಟ್ಟ ಭಾರತೀಯ ಸಂಖ್ಯೆ 45ಕ್ಕೆ ಏರಿಕೆಯಾಗಿದೆ.

ಅಧಿಕಾರಿಗಳು ಇಂದು ಮತ್ತೆ 10 ಮೃತದೇಗಳ ಗುರುತು ಪತ್ತೆ ಹಚ್ಚಿದ್ದು, ಪಶ್ಚಿಮ ಬಂಗಾಳದ ಮೂವರು, ಜಾರ್ಖಂಡ್ ಮತ್ತು ಕೇರಳದ ತಲಾ ಇಬ್ಬರು ಹಾಗೂ ತಮಿಳುನಾಡು, ಮಹಾರಾಷ್ಟ್ರದ ತಲಾ ಒಬ್ಬರು ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಮಹಾ ದುರಂತದಲ್ಲಿ ಮೃತಪಟ್ಟಿದ್ದಾರೆ.

ನಿನ್ನೆ 13 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 35ಕ್ಕೆ ಏರಿಯಾಗಿತ್ತು. ಒಟ್ಟಾರೆ ಇದುವರೆಗೆ ಕಾಲ್ತುಳಿತ ಘಟನೆಯಲ್ಲಿ 769 ಮಂದಿ ಮೃತಪಟ್ಟಿದ್ದಾರೆ ಎಂದು ಸೌದಿ ಅಧಿಕಾರಿಗಳು ತಿಳಿಸಿದ್ದಾರೆ.

ಕಾಲ್ತುಳಿತ ಉಂಟಾಗಿದ್ದು ಹೇಗೆ?
ಜಮಾರತ್‍ಗೆ ತೆರಳುವ 5 ಹಾದಿಗಳಲ್ಲಿ 2 ಹಾದಿಗಳನ್ನು ಮುಚ್ಚಲಾಗಿತ್ತು. ದಿಢೀರನೆ ಇಲ್ಲಿ ಯಾತ್ರಿಗಳ ಸಂಖ್ಯೆ ಹೆಚ್ಚಾಗಿ ಕಾಲ್ತುಳಿತ ಉಂಟಾಯಿತು ಎಂದು ಇರಾನ್ ಆರೋಪಿಸಿದೆ. ಆದರೆ, ಬಸ್  ವ್ಯವಸ್ಥೆಯಿದ್ದರೂ ನಡೆದೇ ಸಾಗುತ್ತೇವೆಂದು ಯಾತ್ರಿಗಳು ಪಟ್ಟು ಹಿಡಿದು ನಡೆಯಲು ಆರಂಭಿಸಿದಾಗ ನೂಕುನುಗ್ಗಲು ಸಂಭವಿಸಿತು. ಸರ್ಕಾರದ ಸೂಚನೆ ಪಾಲಿಸದೇ ತಮ್ಮಿಷ್ಟದಂತೆ  ಯಾತ್ರಿಗಳು ಚಲಿಸಲು ಶುರು ಮಾಡಿದ್ದೇ ದುರಂತಕ್ಕೆ ಕಾರಣವೆಂದು ಸೌದಿ ಆರೋಗ್ಯ ಸಚಿವ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.