ಪಾಕ್‌ನಿಂದ ಪಂಜಾಬ್ ಪ್ರವೇಶಿಸಿದ 15-20 ಉಗ್ರರು, ದೆಹಲಿ ಮೇಲೆ ದಾಳಿ?
ಪಾಕಿಸ್ತಾನದಲ್ಲಿ ತರಬೇತಿ ಪಡೆದಿರುವ 15 ರಿಂದ 20 ಉಗ್ರರು ಗಡಿಯಿಂದ ಅಕ್ರಮವಾಗಿ ಪಂಜಾಬ್ ಪ್ರವೇಶಿಸಿದ್ದು , ದೆಹಲಿ ಸೇರಿದಂತೆ ದೇಶದ ವಿವಿಧ ಕಡೆ ದಾಳಿ...

ನವದೆಹಲಿ: ಪಾಕಿಸ್ತಾನದಲ್ಲಿ ತರಬೇತಿ ಪಡೆದಿರುವ 15 ರಿಂದ 20 ಉಗ್ರರು ಗಡಿಯಿಂದ ಅಕ್ರಮವಾಗಿ ಪಂಜಾಬ್ ಪ್ರವೇಶಿಸಿದ್ದು , ದೆಹಲಿ ಸೇರಿದಂತೆ ದೇಶದ ವಿವಿಧ ಕಡೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಐಎಸ್‌ಐ ನಿಂದ ಈ ಉಗ್ರರು ಶಸ್ತ್ರಾಸ್ತ್ರ ತರಬೇತಿ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಭಾರತಕ್ಕೆ ನುಸುಳಿರುವ ಉಗ್ರರು ಸಿಖ್ ಉಗ್ರಗಾಮಿ ಸಂಘಟನೆಗಳಾದ ಬಬ್ಬರ್ ಖಲ್ಸಾ , ಖಲಿಸ್ತಾನ್ ಜಿಂದಾಬಾದ್ ಫೋರ್ಸ್ ನೊಂದಿಗೆ ಕೈಜೋಡಿಸಲು ಯತ್ನಿಸಿವೆ ಎಂದು ಹೇಳಲಾಗಿದೆ.
ಪಾಕ್ ಐಎಸ್‌ಐ ಲಷ್ಕರ್, ಹಿಜ್ಬುಲ್, ಜೈಷೆ ಮೊಹಮದ್ ಉಗ್ರ ಸಂಘಟನೆಗಳೊಂದಿಗೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ದಾಳಿಗಾಗಿ ಮಾತುಕತೆ ನಡೆಸಿದೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


