ದೇಶ

ಮತದಾರರಿಗೆ ಆಮಿಷ: ಬಿಜೆಪಿ ನಾಯಕ ಸುಶೀಲ್ ಮೋದಿ ವಿರುದ್ಧ ಎಫ್ಐಆರ್

ಬಿಹಾರ ವಿಧಾನಸಭಾ ಚುನಾವಣೆ ಸಂಬಂಧ ಮತದಾರರನ್ನು ಒಲಿಸಿಕೊಳ್ಳಲು ಹಲವು ಆಮಿಷವೊಡ್ಡಿದ್ದಾರೆಂಬ ಆರೋಪದಡಿ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿದೆ...

ಮತದಾರರಿಗೆ ಆಮಿಷ: ಬಿಜೆಪಿ ನಾಯಕ ಸುಶೀಲ್ ಮೋದಿ ವಿರುದ್ಧ ಎಫ್ಐಆರ್
ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ (ಸಂಗ್ರಹ ಚಿತ್ರ)
Published On :

ಪಾಟ್ನ: ಬಿಹಾರ ವಿಧಾನಸಭಾ ಚುನಾವಣೆ ಸಂಬಂಧ ಮತದಾರರನ್ನು ಒಲಿಸಿಕೊಳ್ಳಲು ಹಲವು ಆಮಿಷವೊಡ್ಡಿದ್ದಾರೆಂಬ ಆರೋಪದಡಿ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿದೆ.

ವಿಧಾನಸಭಾ ಚುನಾವಣೆ  ನಿಮಿತ್ತ ನಿನ್ನೆ ಬಬುವಾದ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಸುಶೀಲ್ ಕುಮಾರ್ ಮೋದಿ, ಸ್ಥಳೀಯ ನಾಗರೀಕರಿಗೆ ಉಚಿತ ಲ್ಯಾಪ್ ಟಾಪ್, ಕಲರ್ ಟಿವಿ ಹಾಗೂ ಮಹಿಳೆಯರಿಗೆ ಸೀರೆಗಳನ್ನು ನೀಡುವುದಾಗಿ ಆಮಿಷವೊಡ್ಡಿದ್ದರು ಎಂದು ಹೇಳಲಾಗುತ್ತಿತ್ತು. ಇದೀಗ ಈ ಪ್ರಕರಣ ಸಂಬಂಧ ತನಿಖೆ ನಡೆಸಿರುವ ಅಧಿಕಾರಿಗಳು ಪ್ರಕರಣ ಸಂಬಂಧ ಕೈಮೂರ್ ಜಿಲ್ಲೆಯ ಬಬುವಾ ಪೊಲೀಸ್ ಠಾಣೆಯಲ್ಲಿ ಸುಶೀಲ್ ಕುಮಾರ್ ಮೋದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಹಾರದಲ್ಲಿ ಅಕ್ಟೋಬರ್ 12 ರಿಂದ ನವೆಂಬರ್ 5 ರವರೆಗೆ 243 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 8 ರಂದು ಮತಎಣಿಕೆ ನಡೆಯಲಿದೆ ಎಂದು ತಿಳಿದುಬಂದಿರುವ ಹಿನ್ನೆಲೆಯಲ್ಲಿ ಈಗಾಗಲೇ ಮತದಾರರ ಮನವೊಲಿಸಲು ಪಕ್ಷೇತರ ನಾಯಕರು ಸಕಲ ಯತ್ನ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.