ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ತೆಲಂಗಾಣ ಸಿಎಂ ಮನವಿ
ತೆಲಂಗಾಣ ಸರ್ಕಾರ ರೈತರೊಂದಿಗಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮನವಿ ಮಾಡಿದ್ದಾರೆ.

ಹೈದರಾಬಾದ್: ತೆಲಂಗಾಣ ಸರ್ಕಾರ ರೈತರೊಂದಿಗಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮನವಿ ಮಾಡಿದ್ದಾರೆ.
ವಿಧಾನಸಭೆಯಲ್ಲಿ ರೈತರ ಆತ್ಮಹತ್ಯೆ ವಿಷಯದ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿದ ಚಂದ್ರಶೇಖರ್ ರಾವ್ ರೈತರ ಸಮಸ್ಯೆಗಳನ್ನು ಬಗೆಹರಿಸಲು ತೆಲಂಗಾಣ ಸರ್ಕಾರ ಕ್ರಮ ಕೈಗೊಂಡಿದೆ. ರೈತರು ಅತ್ಮಹೆತ್ಯೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಚಂದ್ರಶೇಖರ್ ರಾವ್ ಮನವಿ ಮಾಡಿದ್ದಾರೆ.
ಕಳೆದ 16 ತಿಂಗಳಲ್ಲಿ ರೈತರ ಅತ್ಮಹೆತ್ಯ ತಡೆಗಟ್ಟಲು ತೆಲಂಗಾಣ ಸರ್ಕಾರ ಕ್ರಮಗಳ ಬಗ್ಗೆ ವಿಧಾನಸಭೆಗೆ ಮಾಹಿತಿ ನೀಡಿದ ಅವರು, ಸಾಲ ಮನ್ನಾ ಮಾಡುವುದಕ್ಕೆ 9 ,000 ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈವರೆಗೂ 36 ಲಕ್ಷ ರೈತರ ಸಾಲ ಮನ್ನಾ ಮಾಡಲು 8 ,000 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಕೆ.ಸಿ.ಆರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


