ಪ್ರತ್ಯೂಷ ಆತ್ಮಹತ್ಯೆ ಪ್ರಕರಣ: ರಾಹುಲ್'ಗೆ ಸಮನ್ಸ್ ನೀಡಿದ ಪೊಲೀಸರು
ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಟ ಹಾಗೂ ಪ್ರತ್ಯೂಷ ಗೆಳೆಯ ರಾಹುಲ್ ರಾಜ್ ಸಿಂಗ್ ಅವರಿಗೆ...

ಮುಂಬೈ: ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಟ ಹಾಗೂ ಪ್ರತ್ಯೂಷ ಗೆಳೆಯ ರಾಹುಲ್ ರಾಜ್ ಸಿಂಗ್ ಅವರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ರಾಹುಲ್ ನನ್ನು ಸಂಪರ್ಕಿಸಲಾಯಿತು. ಇದೀಗ ರಾಹುಲ್ ನನ್ನು ವಿಚಾರಣೆ ನಡೆಸಲಾಗುತ್ತಿದ್ದು. ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ ಎಂದು ಮುಂಬೈ ಪೊಲೀಸ್ ವಕ್ತಾರ ಉಪ ಪೊಲೀಸ್ ಆಯುಕ್ತ ಧನಂಜಯ್ ಕುಲಕರ್ಣಿಯವರು ಹೇಳಿದ್ದಾರೆ.
ರಾಹುಲ್ ರಾಜ್ ಸಿಂಗ್ ಅವರು ನಟರಾಗಿದ್ದು, ಪ್ರತ್ಯೂಷ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನಂತರ ಮೊದಲು ನೋಡಿದ ವ್ಯಕ್ತಿಯಾಗಿದ್ದಾರೆ. ಪ್ರತ್ಯೂಷಳನ್ನು ಕಂಡ ಕೂಡಲೇ ರಾಹುಲ್ ಸ್ಥಳೀಯರಿಗೆ ಮಾಹಿತಿ ನೀಡಿ ಅವರ ಸಹಾಯದ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ರಾಹುಲ್ ಗೆ ಸಮನ್ಸ್ ಜಾರಿ ಮಾಡಿರುವ ಮುಂಬೈ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


