'ವಂದೆ ಮಾತರಂ' ನಿಜವಾದ ರಾಷ್ಟ್ರಗೀತೆ: ಆರ್ ಎಸ್ ಎಸ್ ನಾಯಕ
ಸಾಂವಿಧಾನಿಕವಾಗಿ ಕಡ್ಡಾಯಗೊಳಿಸಿರುವ ಜನ ಗಣ ಮನವನ್ನು ರಾಷ್ಟ್ರಗೀತೆಯೆಂದು ಕರೆಯಲು ವಿರೋಧ ವ್ಯಕ್ತಪಡಿಸಿರುವ...

Published On :
ಮುಂಬೈ: ಸಾಂವಿಧಾನಿಕವಾಗಿ ಕಡ್ಡಾಯಗೊಳಿಸಿರುವ ಜನ ಗಣ ಮನವನ್ನು ರಾಷ್ಟ್ರಗೀತೆಯೆಂದು ಕರೆಯಲು ವಿರೋಧ ವ್ಯಕ್ತಪಡಿಸಿರುವ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಭಯ್ಯಾಜಿ ಜೋಶಿ, ವಂದೇ ಮಾತರಂ ನಿಜವಾದ ರಾಷ್ಟ್ರಗೀತೆ ಎಂದು ಹೇಳಿದ್ದಾರೆ.
ಜನ ಗಣ ಮನ ನಮ್ಮ ರಾಷ್ಟ್ರಗೀತೆ. ಅದಕ್ಕೆ ನಮ್ಮ ಗೌರವವಿದೆ. ಆದರೆ, ನಿಜವಾಗಿ ಅರ್ಥ ಮಾಡಿಕೊಂಡರೆ, ವಂದೆ ಮಾತರಂ ನಮ್ಮ ರಾಷ್ಟ್ರಗೀತೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯಗಳನ್ನು ಗಣನೆಗೆ ತೆಗೆದುಕೊಂಡು ಜನ ಗಣ ಮನವನ್ನು ರಚಿಸಲಾಗಿದೆ. ಆದರೆ, ವಂದೇ ಮಾತರಂ ನಮ್ಮ ದೇಶದ ಪಾತ್ರ ಮತ್ತು ಶೈಲಿಯನ್ನು ವರ್ಣಿಸುತ್ತದೆ. ಇದು ಇವರೆಡರ ನಡುವೆ ಇರುವ ವ್ಯತ್ಯಾಸ. ಹಾಗಾಗಿ, ಎರಡು ಗೀತೆಗಳನ್ನು ಗೌರವಿಸಬೇಕು ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


