ದೇಶ

7ನೇ ವೇತನ ಆಯೋಗ ಜಾರಿ ಮತ್ತಷ್ಟು ವಿಳಂಬ

ಕಳೆದ ನವೆಂಬರ್ ನಲ್ಲಿ ಘೋಷಿಸಲಾಗಿದ್ದ 7ನೇ ವೇತನ ಆಯೋಗವನ್ನು ಜಾರಿಗೊಳಿಸುವ ಮುನ್ನ ಮತ್ತೊಮ್ಮೆ ಶಿಫಾರಸುಗಳ...

7ನೇ ವೇತನ ಆಯೋಗ ಜಾರಿ ಮತ್ತಷ್ಟು ವಿಳಂಬ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಕೇಂದ್ರ ಸರ್ಕಾರ ನೌಕರರು ಏಳನೇ ವೇತನ ಆಯೋಗ ಜಾರಿಗೆ ಮತ್ತಷ್ಟು ದಿನಗಳ ಕಾಯಬೇಕಿದೆ. 
ಕಳೆದ ನವೆಂಬರ್ ನಲ್ಲಿ ಘೋಷಿಸಲಾಗಿದ್ದ 7ನೇ ವೇತನ ಆಯೋಗವನ್ನು ಜಾರಿಗೊಳಿಸುವ ಮುನ್ನ ಮತ್ತೊಮ್ಮೆ ಆಯೋಗದ ಶಿಫಾರಸುಗಳ ಬಗ್ಗೆ ಪರಿಶೀಲನೆ ನಡೆಸಲು ಸಂಪುಟದ ಕಾರ್ಯದರ್ಶಿ ಪಿಕೆ ಸಿನ್ಹಾ ನೇತೃತ್ವದ ಉನ್ನತಾಧಿಕಾರ ಕಾರ್ಯದರ್ಶಿಗಳ ಸಮಿತಿ ರಚಿಸಲಾಗಿತ್ತು. 
ಜೆಸಿಎಂ ನೌಕರರ ಪ್ರತಿನಿಧಿಗಳಿಗೆ ಕೊಟ್ಟಿರುವಂತೆ 7ನೇ ವೇತನ ಆಯೋಗವು ಪರಿಶೀಲಿಸಬೇಕಾದ ವಿಷಯಗಳನ್ನು ನಿರ್ಧರಿಸುವುದು ಸೇರಿದಂತೆ ಇತರ ವಿಷಯಗಳ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಿ, ನಂತರ 7ನೇ ವೇತನ ಆಯೋಗವನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. 
ಜೆಸಿಎಂ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು 7ನೇ ವೇತನ ಆಯೋಗವನ್ನು ಜಾರಿಗೆ ತರಲಾಗುವುದು. ಆದರೆ, ಅದಕ್ಕೂ ಮುನ್ನ ಉನ್ನತಾಧಿಕಾರ ಕಾರ್ಯದರ್ಶಿಗಳ ಸಮಿತಿ ಪರಿಶೀಲನೆ ನಡೆಸಲಿದೆ. ಆದರೆ, ಅದಕ್ಕೆ ಸ್ವಲ್ಪ ಸಮಯಾವಕಾಶ ಬೇಕಿದೆ ಎಂದು ಪಿಕೆ ಸಿನ್ಹಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.