ಜಾತಿ, ಧರ್ಮದ ಮೂಲಕ ಬಿಜೆಪಿ ವಿವಿಯಲ್ಲಿ ಒಡಕು ಮೂಡಿಸುತ್ತಿದೆ: ಮೇಧಾ ಪಾಟ್ಕರ್
ವಿಶ್ವವಿದ್ಯಾನಿಲಯಗಳಲ್ಲಿ ವಿವಾದಗಳು ಭುಗಿಲೇಳುತ್ತಿರುವುದು ದೇಶದ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ಸೂಚಿಸುತ್ತಿದೆ. ಎಬಿವಿಪಿಗೆ ಅದರದ್ದೇ ಆದ ಸ್ಥಾನವಿದೆ. ಹಾಗಂತ...

Published On :
ಹೈದ್ರಾಬಾದ್ : ಜಾತಿ ಮತ್ತು ಧರ್ಮದ ಮೂಲಕ ಬಿಜೆಪಿ ಸರ್ಕಾರ ವಿಶ್ವವಿದ್ಯಾನಿಲಯಗಳಲ್ಲಿ ಒಡಕು ಮೂಡಿಸುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಆರೋಪಿಸಿದ್ದಾರೆ.
ವಿಶ್ವವಿದ್ಯಾನಿಲಯಗಳಲ್ಲಿ ವಿವಾದಗಳು ಭುಗಿಲೇಳುತ್ತಿರುವುದು ದೇಶದ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ಸೂಚಿಸುತ್ತಿದೆ. ಎಬಿವಿಪಿಗೆ ಅದರದ್ದೇ ಆದ ಸ್ಥಾನವಿದೆ. ಹಾಗಂತ ಅವರು ಇನ್ನಿತರ ವಿದ್ಯಾರ್ಥಿ ಸಂಘಟನೆಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಗಳನ್ನು ಮಾಡಬಾರದು.
ಹೈದ್ರಾಬಾದ್‌ನಲ್ಲಿ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲು ಮೇಧಾ ಪಾಟ್ಕರ್ ಹೈದ್ರಾಬಾದ್ ವಿವಿಗೆ ಹೋದಾಗ ಅಲ್ಲಿ ವಿದ್ಯಾರ್ಥಿಗಳು ಇವರಿಗೆ ತಡೆಯೊಡ್ಡಿದ್ದರು. ಅದೇ ವೇಳೆ ವಿವಿಯೊಳಗೆ ಸಾಮಾಜಿಕ ಕಾರ್ಯಕರ್ತರಿಗೆ ಮತ್ತು ಮಾಧ್ಯಮದವರ ಪ್ರವೇಶಕ್ಕೆ ತಡೆಯೊಡ್ಡುವುದು, ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡುವುದು ಮತ್ತು ಕ್ಯಾಂಟಿನ್‌ನ್ನು ಮುಚ್ಚಿರುವ ವಿವಿ ಅಧಿಕೃತರ ನಿರ್ಧಾರ ಬಾಲಿಶವಾಗಿದೆ ಎಂದು ಮೇಧಾ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


