ಕಲ್ಲಿದ್ದಲು ಹಗರಣದ ಮೊದಲ ತೀರ್ಪು: ಅಪರಾಧಿಗಳಿಗೆ 4 ವರ್ಷ ಜೈಲು ಶಿಕ್ಷೆ
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಸ್ಪತ್ ಪ್ರೖೆವೇಟ್ ಲಿಮಿಟೆಡ್.(ಜೆಐಪಿಎಲ್)ನ ನಿರ್ದೇಶಕ ಆರ್.ಎಸ್ ರಂಗ್ಟ ಹಾಗೂ ಆರ್.ಸಿ.ರಂಗ್ಟ...

Published On :
ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಸ್ಪತ್ ಪ್ರೖೆವೇಟ್ ಲಿಮಿಟೆಡ್.(ಜೆಐಪಿಎಲ್)ನ ನಿರ್ದೇಶಕ ಆರ್.ಎಸ್ ರಂಗ್ಟ ಹಾಗೂ ಆರ್.ಸಿ.ರಂಗ್ಟ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಳೆದ ಮಾರ್ಚ್ 28ರಂದು ಕಲ್ಲಿದ್ದಲು ಹಗರಣದ ಮೊದಲ ತೀರ್ಪು ಪ್ರಕಟಿಸಿದ್ದ ಸಿಬಿಐ ನ್ಯಾಯಾಲಯ, ,ಆರ್.ಎಸ್ ರಂಗ್ಟ ಹಾಗೂ ಆರ್.ಸಿ.ರಂಗ್ಟ ಅವರು ತಪ್ಪಿತಸ್ಥರು ಎಂದು ಹೇಳಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದರಿಸಿತ್ತು. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ ಸಿಬಿಐ ವಿಶೇಷ ನ್ಯಾಯಾಧೀಶ ಭರತ್ ಪರಶರ್ ಅವರು, ಅಪರಾಧಿಗಳಿಗೆ ನಾಲ್ಕು ವರ್ಷ ಜೈಲು ಹಾಗೂ ತಲಾ 5ಲಕ್ಷ ದಂಡ ವಿಧಿಸಿದ್ದಾರೆ. ಅಲ್ಲದೆ ಜೆಐಪಿಎಲ್ ಕಂಪನಿ ಕೂಡ 25 ಲಕ್ಷ ರುಪಾಯಿ ದಂಡ ಕಟ್ಟಬೇಕು ಎಂದು ನ್ಯಾಯಾಲಯ ಆಜ್ಞಾಪಿಸಿದೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆಂದೇ ಸ್ಥಾಪಿಸಲಾದ ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಮೊದಲ ಪ್ರಕರಣ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


