ಧಾರ್ಮಿಕ ಶ್ರದ್ಧೆ ವಿಷಯಗಳಿಂದ ನ್ಯಾಯಾಲಯಗಳು ದೂರವಿರಲಿ: ಶಿವಸೇನೆ
ಮುಂಬೈ ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ, ನ್ಯಾಯಾಲಯಗಳು ಧಾರ್ಮಿಕ ವಿಷಯಗಳಿಂದ ದೂರವಿರಬೇಕು ಎಂದು ಅಭಿಪ್ರಾಯಪಟ್ಟಿದೆ.

ಮುಂಬೈ: ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೆ ಮಹಿಳೆಯರಿಗೂ ಸಮಾನ ಹಕ್ಕಿದೆ ಎಂಬ ಬಾಂಬೆ ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ, ನ್ಯಾಯಾಲಯಗಳು ಧಾರ್ಮಿಕ ವಿಷಯಗಳಿಂದ ದೂರವಿರಬೇಕು ಎಂದು ಅಭಿಪ್ರಾಯಪಟ್ಟಿದೆ.
ಧಾರ್ಮಿಕ ವಿಷಯಗಳನ್ನು ನ್ಯಾಯಾಲಯಗಳಿಗೆ ಕೊಂಡೊಯ್ಯಬಾರದು ಇಂತಹ ವಿಷಯಗಳನ್ನು ಧಾರ್ಮಿಕ ಸಂತರೊಂದಿಗೆ ಚರ್ಚೆ ಮಾಡುವ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಶಿವಸೇನೆ ಸಾಮ್ನಾದ ಸಂಪಾದಕೀಯದಲ್ಲಿ ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರದಲ್ಲಿರುವ ಶಿರಡಿ ಸಾಯಿಬಾಬಾ ಅವರ ಧರ್ಮದ ಬಗ್ಗೆ ಇಂದಿಗೂ ಗೊಂದಲಗಳಿವೆ, ಅಂತಹ ಗೊಂದಲಗಳನ್ನು ನ್ಯಾಯಾಲಯಗಳು ತೀರ್ಮಾನಿಸಲು ಸಾಧ್ಯವಿಲ್ಲ, ಹಾಗೆಯೇ ರಾಮ ನಿಜಕ್ಕೂ ಅಯೋಧ್ಯೆಯಲ್ಲಿಯೇ ಹುಟ್ಟಿದ್ದಾ ಎಂಬ ವಿಷಯದ ಬಗ್ಗೆ ನ್ಯಾಯಾಲಯಗಳು ತೀರ್ಪು ನೀಡಲು ಸಾಧ್ಯವಿಲ್ಲ ಅವೆಲ್ಲವೂ ಧಾರ್ಮಿಕ ನಂಬಿಕೆಗಳ ವಿಷಯವಾಗಿರಲಿದೆ ಎಂದು ಶಿವಸೇನೆ ಹೇಳಿದೆ.
ಶನಿ ಶಿಂಗ್ಣಾಪುರ ದೇವಾಲಯದಲ್ಲಿ ಯಾರಿಗೆ ಪ್ರವೇಶ ನೀಡಬೇಕು ಯಾರಿಗೆ ನೀಡಬಾರದು ಎಂಬ ಬಗ್ಗೆ ದೇವಾಲಯದ ಟ್ರಸ್ಟಿಗಳು, ಗ್ರಾಮಸ್ಥರು, ಭಕ್ತರೇ ನಿರ್ಧರಿಸಬೇಕು ಎಂದು ಶಿವಸೇನೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


