ದೇಶ

ಅಧಿಕಾರ ಸ್ವೀಕರಿಸಿದ ಮೆಹಬೂಬಾ ಮುಫ್ತಿಗೆ ಪ್ರಧಾನಿ ಮೋದಿ ಅಭಿನಂದನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿಯವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೆಹಬೂಬಾ...

ಅಧಿಕಾರ ಸ್ವೀಕರಿಸಿದ ಮೆಹಬೂಬಾ ಮುಫ್ತಿಗೆ ಪ್ರಧಾನಿ ಮೋದಿ ಅಭಿನಂದನೆ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿಯವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೆಹಬೂಬಾ ಅವರಿಗೆ ಸೋಮವಾರ ಅಭಿನಂದನೆ ಸಲ್ಲಿಸಿದ್ದಾರೆ.

ಇಂದು ಅಧಿಕಾರ ಸ್ವೀಕರಿಸಿರುವ ಮೆಹಬೂಬಾ ಮುಫ್ತಿಯವರಿಗೆ, ಡಾ.ನಿರ್ಮಲ್ ಸಿಂಗ್ ಹಾಗೂ ಇನ್ನಿತರೆ ಸಚಿವರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಚನೆಯಾಗಿರುವ ಹೊಸ ಸರ್ಕಾರ ಜನತೆಯ ಕನಸುಗಳು ಹಾಗೂ ಆಕಾಂಕ್ಷೆಗಳನ್ನು ನನಸು ಮಾಡಲಿದೆ ಎಂದು ನನಗೆ ವಿಶ್ವಾಸವಿದೆ. ಹಾಗೂ ಜಮ್ಮು-ಕಾಶ್ಮೀರವನ್ನು ಪ್ರಗತಿಯತ್ತೆ ಕೊಂಡೊಯ್ಯಲಿದೆ ಎಂದು ನನಗೆ ನಂಬಿಕೆಯಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದು, ಶ್ರೀನಗರದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎನ್ ಎನ್ ವೋಹ್ರಾ ಅವರು ಮುಫ್ತಿಯವರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಮೆಹಬೂಬಾ ಮುಫ್ತಿಯವರೊಂದಿಗೆ ಉಪಮುಖ್ಯಮಂತ್ರಿ ಆಗಿ ಬಿಜೆಪಿಯ ನಿರ್ಮಲ್ ಸಿಂಗ್ ಅವರು ಕೂಡ ಪ್ರಮಾಣವಚನ ಸ್ವೀಕರಿಸಿದರು. ಇದರಂತೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 16 ಮಂದಿ ಕ್ಯಾಬಿನೆಟ್ ಸಚಿವರು ಹಾಗೂ 8 ಜನ ರಾಜ್ಯ ಸಚಿವರು ಹಾಗೂ ಇಬ್ಬರು ಬಿಜೆಪಿ ಶಾಸಕರು ಸ್ವತಂತ್ರ ಖಾತೆ ಸಚಿವರು ಅಧಿಕಾರ ಸ್ವೀಕಾರ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.