ಜೆಎನ್‌ಯು, ಹೈದರಾಬಾದ್ ದೇಶದ ಅತ್ಯುತ್ತಮ ವಿವಿಗಳು
ಇತ್ತೀಚಿಗೆ ತೀವ್ರ ವಿವಾದಗಳಿಂದ ಭಾರಿ ಸುದ್ದಿಯಾಗಿದ್ದ ದೆಹಲಿಯ ಜವಹಾರಲಾಲ್ ನೆಹರೂ ವಿಶ್ವವಿದ್ಯಾನಿಲಯ(ಜೆಎನ್‌ಯು) ಹಾಗೂ ಹೈದರಾಬಾದ್ ವಿಶ್ವವಿದ್ಯಾನಿಲಯಗಳು ಕೇಂದ್ರೀಯ...

Published On :
ನವದೆಹಲಿ: ಇತ್ತೀಚಿಗೆ ತೀವ್ರ ವಿವಾದಗಳಿಂದ ಭಾರಿ ಸುದ್ದಿಯಾಗಿದ್ದ ದೆಹಲಿಯ ಜವಹಾರಲಾಲ್ ನೆಹರೂ ವಿಶ್ವವಿದ್ಯಾನಿಲಯ(ಜೆಎನ್‌ಯು) ಹಾಗೂ ಹೈದರಾಬಾದ್ ವಿಶ್ವವಿದ್ಯಾನಿಲಯಗಳು ಕೇಂದ್ರೀಯ ವಿಶ್ವವಿದ್ಯಾನಿಲಯಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿವೆ.
ನ್ಯಾಷನಲ್ ಇನ್‌ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್‌ವರ್ಕ್ (ಎನ್‌ಐಆರ್‌ಎಫ್) ಸಂಸ್ಥೆ ನಡೆಸಿರುವ ಸಮೀಕ್ಷೆಯಿಂದ ಈ ಅಂಶ ತಿಳಿದುಬಂದಿದೆ.
ಎನ್‌ಐಆರ್‌ಎಫ್ ಸಂಸ್ಥೆಯು ದೇಶದ 3,500 ಶಿಕ್ಷಣ ಸಂಸ್ಥೆಗಳನ್ನು ಸಮೀಕ್ಷೆ ನಡೆಸಿ ಸಿದ್ಧಪಡಿಸಿರುವ ರ್ಯಾಂಕಿಂಗ್ ವರದಿಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಸೋಮವಾರ ಬಿಡುಗಡೆ ಮಾಡಿದರು.
ವಿಶ್ವವಿದ್ಯಾನಿಲಯಗಳ ವಿಭಾಗದಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಹಾಗೂ ಮುಂಬೈನ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ (ಐಸಿಟಿ) ಅಗ್ರಸ್ಥಾನದಲ್ಲಿವೆ.
ವರದಿ ಬಿಡುಗಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇರಾನಿ, ‘ವಿಶ್ವವಿದ್ಯಾಲಯಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳ ರ್ಯಾಕಿಂಗ್ ವ್ಯವಸ್ಥೆಯಿಂದ ಯಾವ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಬೇಕೆಂಬ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದಂತಾಗುತ್ತದೆ. ಇನ್ನಷ್ಟು ವಿಭಾಗಗಳ ಶೈಕ್ಷಣಿಕ ಸಂಸ್ಥೆಗಳನ್ನು ಎನ್‌ಐಆರ್‌ಎಫ್ ಸಮೀಕ್ಷೆಗೆ ಒಳಪಡಿಸಲಾಗುವುದು’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


