ಮೊದಲ ಹಂತದ ಚುನಾವಣೆ: ಪಶ್ಚಿಮ ಬಂಗಾಳ ಶೇ. 63.3, ಅಸ್ಸಾಂ ಶೇ.51 ರಷ್ಟು ಮತದಾನ
ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಸೋಮವಾರ ಮೊದಲ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಈ ವರೆಗೂ ಪಶ್ಚಿಮ ಬಂಗಾಳದಲ್ಲಿ ಶೇ.63.3, ಅಸ್ಸಾನಲ್ಲಿ ಶೇ.51ರಷ್ಟು...

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಸೋಮವಾರ ಮೊದಲ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಈ ವರೆಗೂ ಪಶ್ಚಿಮ ಬಂಗಾಳದಲ್ಲಿ ಶೇ.63.3, ಅಸ್ಸಾನಲ್ಲಿ ಶೇ.51ರಷ್ಟು ಮತದಾನವಾಗಿರುವುದಾಗಿ ತಿಳಿದುಬಂದಿದೆ.
ಪಶ್ಚಿಮ ಬಂಗಾಳದ 18. ಅಸ್ಸಾಂನ 65 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 1 ತಿಂಗಳ ಕಾಲ ಈ ಪ್ರಕ್ರಿಯೆ ನಡೆಯಲಿದೆ. ಪಶ್ಚಿಮ ಬಂಗಾಳದ ನಕ್ಸಲ್ ಪೀಡಿತ ಪ್ರದೇಶದಗಳಾದ ಪಶ್ಚಿಮ ಮಿಡ್ನಾಪುರ, ಪುರೂಲಿಯ ಮತ್ತು ಬಂಕುರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಮೂಲಗಳಿಂದ ತಿಳಿದುಬಂದಿರುವ ಪ್ರಕಾರ ಪಶ್ಚಿಮ ಮಿಡ್ನಾಪುರದಲ್ಲಿ ಶೇ.65.45, ಪುರೂಲಿಯ ಶೇ. 61.95 ಹಾಗೂ ಬಂಕುರದಲ್ಲಿ ಶೇ. 62.15ರಷ್ಟು ಮತದಾನವಾಗಿರುವುದಾಗಿ ತಿಳಿದುಬಂದಿದೆ.
ಈ ಪ್ರದೇಶಗಳು ನಕ್ಲಲ್ ಪೀಡಿತ ಪ್ರದೇಶವಾದ್ದರಿಂದ ಈಗಾಗಲೇ ಎಚ್ಚರಿಕೆ ಕ್ರಮಕೈಗೊಂಡಿರುವ ಚುನಾವಣಾ ಆಯೋಗವು ಹೆಚ್ಚಿನ ಭದ್ರತೆಯನ್ನು ಒದಗಿಸಿದೆ. ಅಲ್ಲದೆ, ಚುನಾವಣೆ ಪ್ರಕ್ರಿಯೆಯನ್ನು ಸಂಜೆ 4 ಗಂಟೆಗೆ ಅಂತಿಮಗೊಳಿಸಲಿದೆ. ಇನ್ನು ಪುರುಲ್ಯಾ, ಮನ್ಬಜಾರ್, ಕಶಿಪುರ, ಪರ ಮತ್ತು ರಘುನಾಥ್ ಪುರದಲ್ಲಿ ಸಂಜೆ 6 ಗಂಟೆಗಳ ವರೆಗೂ ಚುನಾವಣಾ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳದಲ್ಲಿನ 18 ಕ್ಷೇತ್ರಗಳಲ್ಲಿ 133 ಅಭ್ಯರ್ಥಿಗಳು ಕಣದಲ್ಲಿಳಿದಿದ್ದು, ಪಶ್ಚಿಮ ಬಂಗಾಳದಲ್ಲಿ ಒಟ್ಟು 6 ಹಂತಗಳಲ್ಲಿ ಚುನಾವಣೆ ನಡೆಸಲಿದೆ. ಅಸ್ಸಾಂ ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ ಪೂರ್ಣಗೊಳ್ಳಲಿದೆ.
ಇನ್ನುಳಿದಂತೆ ಅಸ್ಸಾಂನಲ್ಲೂ ಶೇ.51 ರಷ್ಟು ಮತದಾನವಾಗಿರುವುದಾಗಿ ತಿಳಿದುಬಂದಿದ್ದು, 65 ಕ್ಷೇತ್ರಗಳಲ್ಲಿ ಕಣದಲ್ಲಿರುವ 539 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಸ್ತುತ ತಿಳಿದು ಬಂದಿರುವ ಪ್ರಕಾರ ಮುಖ್ಯಮಂತ್ರಿ ತರುಣ್ ಗಗೋಯ್ ಸೇರಿದಂತೆ 95,11,732 ಮತದಾರರು ಈಗಾಗಲೇ ಮತದಾನ ಮಾಡಿರುವುದಾಗಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


