ಭಾರತ್ ಮಾತಾ ಕಿ ಜೈ ಸಾಂವಿಧಾನಿಕವಲ್ಲ ಆದರೆ ರಾಷ್ಟ್ರೀಯ ಕರ್ತವ್ಯ: ನಖ್ವಿ
ಭಾರತ್ ಮಾತಾ ಕಿ ಜೈ ಘೋಷಣೆ ಕೂಗುವುದು ಸಾಂವಿಧಾನಿಕವಲ್ಲದೇ ಇರಬುಹುದು. ಆದರೆ, ದೇಶದ ಪರ ಘೋಷಣೆ ಕೂಗುವುದು ನಮ್ಮ ರಾಷ್ಟ್ರೀಯ ಕರ್ತವ್ಯವೆಂದು ರಾಜ್ಯ...

ನವದೆಹಲಿ: ಭಾರತ್ ಮಾತಾ ಕಿ ಜೈ ಘೋಷಣೆ ಕೂಗುವುದು ಸಾಂವಿಧಾನಿಕವಲ್ಲದೇ ಇರಬುಹುದು. ಆದರೆ, ದೇಶದ ಪರ ಘೋಷಣೆ ಕೂಗುವುದು ನಮ್ಮ ರಾಷ್ಟ್ರೀಯ ಕರ್ತವ್ಯವೆಂದು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಮಂಗಳವಾರ ಹೇಳಿದ್ದಾರೆ.
ಭಾರತ್ ಮಾತಾ ಕಿ ಜೈ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕೆಲವರು ಭಾರತ್ ಮಾತಾ ಕಿ ಜೈ ಹೇಳಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಜನರು ಯಾವ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂಬುದನ್ನು ಅರ್ಥ ಮಾಡಿಕೊಳ್ಳುವಲ್ಲಿ ನಾನು ವಿಫಲನಾಗಿದ್ದೇನೆಂದು ಹೇಳಿದ್ದಾರೆ.
ಭಾರತ್ ಮಾತಾ ಕೀ ಜೈ ಕೂಗುವುದರಲ್ಲಿ ಯಾವುದೇ ನಿರ್ಬಂಧವಿಲ್ಲ. ಆದರೆ, ಈ ಬಗೆಗೆ ವ್ಯಕ್ತವಾಗುತ್ತಿರುವ ದ್ವೇಷ ಪೂರಿತ ಬೆಳವಣಿಗೆ ನಿಜಕ್ಕೂ ಅಪಾಯಕಾರಿಯಾದದ್ದು. ಭಾರತ್ ಮಾತಾ ಕಿ ಜೇ ಘೋಷಣೆ ಕೂಗುವುದು ಸಂವಿಧಾನದಲ್ಲಿಲ್ಲ ನಿಜ. ಆದರೆ, ದೇಶದ ಪರ ಘೋಷಣೆ ಕೂಗುವುದು ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.
ಈ ಹಿಂದಷ್ಟೇ ಭಾರತ್ ಮಾತಾ ಕಿ ಜೈ ವಿವಾದ ಕುರಿತಂತೆ ಮಾತನಾಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗಲು ವಿರೋಧ ವ್ಯಕ್ತಪಡಿಸುವವರಿಗೆ ದೇಶದಲ್ಲಿರುವ ಹಕ್ಕಿಲ್ಲ ಎಂದು ಹೇಳಿದ್ದರು.
ಮಾರ್ಚ್ 3 ರಂದು ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಹೈದರಾಬಾದ್ ನ ಸಂಸದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ ಎಂದು ಹೇಳಿದ್ದರು.
ಇದರಂತೆ ದಾರೂಲ್ ಉಲೂಂ ಎಂಬ ಫತ್ವ ಇಲಾಖೆ ಭಾರತ್ ಮಾತಾ ಕಿ ಜೈ ವಿರುದ್ಧ ಫತ್ವಾವೊಂದನ್ನು ಹೊರಡಿಸಿದ್ದು, ಇಲಾಖೆ ಹೊರಡಿಸಿದ್ದ ಫತ್ವಾದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆ ಕೂಗುವುದು ಇಸ್ಲಾಂ ಧರ್ಮಕ್ಕೆ ವಿರುದ್ಧವಾದದ್ದು ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


