ದೇಶ

ಯುನೆಸ್ಕೋ ಕಚೇರಿಯಲ್ಲಿ ಗಣಿತಶಾಸ್ತ್ರಜ್ಞ ಆರ್ಯಭಟರ ಪ್ರತಿಮೆ ಅನಾವರಣಗೊಳಿಸಲಿರುವ ಸ್ಮೃತಿ ಇರಾನಿ

ಫ್ರಾನ್ಸ್ ನಲ್ಲಿರುವ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಏ.4 ರಿಂದ ಶೂನ್ಯದ ಬಗ್ಗೆ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದೆ.

ಯುನೆಸ್ಕೋ ಕಚೇರಿಯಲ್ಲಿ ಗಣಿತಶಾಸ್ತ್ರಜ್ಞ ಆರ್ಯಭಟರ ಪ್ರತಿಮೆ ಅನಾವರಣಗೊಳಿಸಲಿರುವ ಸ್ಮೃತಿ ಇರಾನಿ
ಸ್ಮೃತಿ ಇರಾನಿ
Published On :

ನವದೆಹಲಿ: ಫ್ರಾನ್ಸ್ ನಲ್ಲಿರುವ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಏ.4 ರಿಂದ ಶೂನ್ಯದ ಬಗ್ಗೆ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನದಲ್ಲಿ ಭಾಗವಹಿಸಲಿರುವ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ, ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಭಾರತೀಯ ಗಣಿತಶಾಸ್ತ್ರಜ್ಞ ಆರ್ಯಭಟ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.      
ಯುನೆಸ್ಕೋದಲ್ಲಿ ಕಳೆದ ನವೆಂಬರ್ ನಲ್ಲಿ ನಡೆದಿದ್ದ ಲೀಡರ್ಸ್ ಪೋರಂ ನಲ್ಲಿ ಸ್ಮೃತಿ ಇರಾನಿ ಭಾಗವಹಿಸಿದ್ದರು ಈ ವೇಳೆ ಶೂನ್ಯದ ಪ್ರಸ್ತುತತೆ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವೊಂದನ್ನು ನಡೆಸಲು ತೀರ್ಮಾನಿಸಲಾಗಿತ್ತು. ಏ.4 ರಿಂದ 5 ವರೆಗೆ  ಶೂನ್ಯದ ಬಗ್ಗೆ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದ್ದು, ಮೊಟ್ಟಮೊದಲ ಬಾರಿಗೆ ಸೊನ್ನೆಯನ್ನು ಪರಿಚಯಿಸಿ ಗಣಿತಶಾಸ್ತ್ರದ ಬೆಳವಣಿಗೆಗೆ ಕಾರಣರಾದ ಭಾರತೀಯ ಗಣಿತ ಶಾಸ್ತ್ರಜ್ಞ ಆರ್ಯಭಟರ  ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.  
ದಶಮಾಂಶ ಪದ್ಧತಿಯಲ್ಲಿ ಸೊನ್ನೆಯ ಪರಿಕಲ್ಪನೆ ಭಾರತೀಯ ಕೊಡುಗೆಯಾಗಿದೆ. ಆದ್ದರಿಂದ ಯುನೆಸ್ಕೋದಲ್ಲಿ ಭಾರತದ ಖ್ಯಾತ ಗಣಿತ ಶಾಸ್ತ್ರಜ್ಞ ಆರ್ಯಭಟನ ಕಂಚಿನ ಪ್ರತಿಮೆಯನ್ನು ನಿರ್ಮಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.