ಎಲ್.ಕೆ. ಅಡ್ವಾಣಿ ಪತ್ನಿ ಕಮಲಾ ನಿಧನ, ಪ್ರಧಾನಿ ಸಂತಾಪ
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ ಅವರು ಬುಧವಾರ ಹೃದಯಾಘಾತದಿಂದ...

Published On :
ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ(85) ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಮಲಾ ಅಡ್ವಾಣಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಮಲಾ ಅಡ್ವಾಣಿಯವರನ್ನು ಕಳೆದ ಡಿಸೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಕಮಲಾ ಅಡ್ವಾಣಿಯವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


