ದೇಶ

ಎನ್ ಐಟಿ ಶ್ರೀನಗರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡಲ್ಲ: ಸ್ಮೃತಿ ಇರಾನಿ

ವಿಶ್ವಕಪ್ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ವೆಸ್ಟ್ ಇಂಡೀಸ್ ಜಯಗಳಿಸಿದ ವೇಳೆ ನಡೆದ ಸಂಭ್ರಮಾಚರಣೆ ಸಂದರ್ಭ ವಿದ್ಯಾಥಿಗಳ ಮಧ್ಯೆ...

ಎನ್ ಐಟಿ ಶ್ರೀನಗರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡಲ್ಲ: ಸ್ಮೃತಿ ಇರಾನಿ
ಸ್ಮೃತಿ ಇರಾನಿ
Published On :
ನವದೆಹಲಿ: ವಿಶ್ವಕಪ್ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ವೆಸ್ಟ್ ಇಂಡೀಸ್ ಜಯಗಳಿಸಿದ ವೇಳೆ ನಡೆದ ಸಂಭ್ರಮಾಚರಣೆ ಸಂದರ್ಭ ವಿದ್ಯಾಥಿಗಳ ಮಧ್ಯೆ ಸಂಭವಿಸಿದ ಘರ್ಷಣೆಗಳಿಂದ ಪ್ರಕ್ಷುಬ್ಧಗೊಂಡಿರುವ ಶ್ರೀನಗರದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್​ಐಟಿ) ಕ್ಯಾಂಪಸ್ ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈಗಾಗಲೇ ಇಬ್ಬರು ಸದಸ್ಯರ ತಂಡವೊಂದನ್ನು ಕಳುಹಿಸಿದೆ.
ಕ್ಯಾಂಪಸ್ ನಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ತಡೆಯುವ ಕುರಿತು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರೊಂದಿಗೆ ಮಾತುಕತೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಹೇಳಿದ್ದಾರೆ.
ಕಳೆದ ವಾರ ವಿಶ್ವ ಕಪ್‌ ಸೆಮಿ ಫೈನಲ್‌ ಪಂದ್ಯದಲ್ಲಿ ಭಾರತ, ವೆಸ್ಟ್‌ ಇಂಡೀಸ್‌ ತಂಡದೆದುರು ಪರಾಭವಗೊಂಡದ್ದನ್ನು ಅನುಸರಿಸಿ ಶ್ರೀನಗರದ ಎನ್‌ಐಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಗುಂಪು ಪರಸ್ಪರ ಹೊಡೆದಾಡಿಕೊಂಡ ಕಾರಣ ತೀವ್ರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
ಈ ಹಿನ್ನಲೆಯಲ್ಲಿ ಓರ್ವ ನಿರ್ದೇಶಕ ಮತ್ತು ಓರ್ವ ಉಪ ಕಾರ್ಯದರ್ಶಿ ಮಟ್ಟದ ಇಬ್ಬರು ಉನ್ನತ ಅಧಿಕಾರಿಗಳನ್ನು ಒಳಗೊಂಡ ತಂಡವೊಂದನ್ನು ಬುಧವಾರ ಶ್ರೀನಗರ ಎನ್‌ಐಟಿಗೆ ಕಳುಹಿಸಿದ್ದು, ತಂಡವು ವಿದ್ಯಾರ್ಥಿಗಳ ದೂರು ದುಮ್ಮಾನಗಳನ್ನು ಆಲಿಸಲಿದೆ ಎಂದು ಅವರು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.