ದೇಶ

ಇಸಿಸ್ ನಂಟು: ಬಂಧಿತ ಶಂಕಿತ ಉಗ್ರ ಭಟ್ಕಳದವನು!

ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆಗೆ ಸೇರಲು ಸಿರಿಯಾಗೆ ಪ್ರಯಾಣ ಬೆಳೆಸಿದ್ದ ಕರ್ನಾಟಕದ ಭಟ್ಕಳ ಮೂಲದ ಶಂಕಿತ ಉಗ್ರನನ್ನು...

ಇಸಿಸ್ ನಂಟು: ಬಂಧಿತ ಶಂಕಿತ ಉಗ್ರ ಭಟ್ಕಳದವನು!
ಉಗ್ರ(ಸಂಗ್ರಹ ಚಿತ್ರ)
Published On :
ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆಗೆ ಸೇರಲು ಸಿರಿಯಾಗೆ ಪ್ರಯಾಣ ಬೆಳೆಸಿದ್ದ ಉಗ್ರನನ್ನು ಪುಣೆ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಬಂಧಿತ ಉಗ್ರ ಕರ್ನಾಟಕದ ಭಟ್ಕಳ ಮೂಲದವನು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಪುಣೆಯಿಂದ ದುಬೈ ಮೂಲಕ ಸಿರಿಯಾಗೆ ಪ್ರಯಾಣ ಬೆಳೆಸಿದ್ದ ಭಟ್ಕಳ ಮೂಲದ ಇಸ್ಮಾಯಿಲ್ ಮಸೂದ್ ಅಬ್ದುಲ್ ರಾವೂಫ್ ಅಲಿಯಾಸ್ ರಾವೂಫ್ ಅಹಮ್ಮದ್ ಎಂದು ತಿಳಿದುಬಂದಿದ್ದು, ರಾವೂಫ್ ಇಸಿಸ್ ಉಗ್ರ ಸಂಘಟನೆ ಸೇರುವ ಖಚಿತ ಮಾಹಿತಿಯ ಪಡೆದ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದರು.
ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ರಿಯನಾಗಿದ್ದ ರಾವೂಫ್ ಇಸಿಸ್ ಸಂಘಟನೆಯೊಂದಿಗೆ ಸಂಪರ್ಕ ಸಾಧಿಸಿ, ಸಂಘಟನೆ ಸೇರಿಕೊಳ್ಳುವ ಬಗ್ಗೆ ಮಾತುಕತೆ ನಡೆಸಿದ್ದ ಎನ್ನಲಾಗಿದೆ. ಅಲ್ಲದೆ ಸಿರಿಯಾ ಮತ್ತು ಇರಾಕ್​ಗಳಲ್ಲಿ ಸಾಕಷ್ಟು ಚುರುಕಾಗಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪದನೆ ಸಂಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿಕೊಂಡಿದ್ದ ಎಂಬುದು ವಿಚಾರಣೆ ವೇಳೆ ಬಹಿರಂಗವಾಗಿದೆ.
ಭಟ್ಕಳದ ನಾವಾಯತ್ ಕಾಲೋನಿಯ ನಿವಾಸಿಯಾಗಿರುವ ವಿಚಾರ ಸಂಗ್ರಹಿಸಿದ ಪೊಲೀಸರು ರಾವೂಫ್ ನ ಮನೆಗೆ ಭೇಟಿ ನೀಡಿ ಪೋಷಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.