ಖಾತೆ ಬಗ್ಗೆ ಅಸಮಾಧಾನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಮ್ಮು-ಕಾಶ್ಮೀರ ಶಾಸಕ
ಜಮ್ಮು-ಕಾಶ್ಮೀರ ಸರ್ಕಾರದ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತವಾಗಿದ್ದು ಓರ್ವ ಶಾಸಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜಮ್ಮು: ಜಮ್ಮು-ಕಾಶ್ಮೀರ ಸರ್ಕಾರದ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತವಾಗಿದ್ದು ಓರ್ವ ಶಾಸಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗೀರುವ ಸಜ್ಜದ್ ಲೋನ್ ತಮಗೆ ನೀಡಲಾಗಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಖಚಿತಪಡಿಸಿರುವ ಬಿಜೆಪಿ ಹೈಕಮಾಂಡ್, ರಾಜೀನಾಮೆ ಪತ್ರವನ್ನು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಗೆ ರವಾನಿಸಿದೆ.
ಪೀಪಲ್ಸ್ ಕಾನ್ಫರೆನ್ಸ್ ನ ಅಧ್ಯಕ್ಷರಾಗಿರುವ ಮಾಜಿ ಪ್ರತ್ಯೇಕತಾವಾದಿ ಸಜ್ಜದ್ ಲೋನ್ 2014 ರ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕುಪ್ವಾರ ಜಿಲ್ಲೆಯ ಹಂದ್ವಾರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
ತಮಗೆ ನೀಡಲಾಗಿದ್ದ ಸಮಾಜ ಕಲ್ಯಾಣ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಜ್ಜದ್ ಲೋನ್ ಅವರ ನಿಕಟವರ್ತಿಗಳು, "ವಿಶ್ವಾಸವಿಟ್ಟಿರುವ ಜನರಿಗೆ ಸಜ್ಜದ್ ಲೋನ್ ಉತ್ತರದಾಯಿಯಾಗಿದ್ದಾರೆ ಎಂದು ಹೇಳಿದ್ದಾರೆ. ಆದರೆ ದೂರವಾಣಿ ಸಂಪರ್ಕಕ್ಕೂ ಸಿಗದೇ ಸಜ್ಜದ್ ಲೋನ್ ಮಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ನಿರ್ಧಾರವನ್ನು ಬದಲಾಯಿಸಿಕೊಳ್ಳುವಂತೆ ಸಜ್ಜದ್ ಲೋನ್ ಅವರನ್ನು ಬಿಜೆಪಿ-ಪಿಡಿಪಿ ನಾಯಕರು ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸಜ್ಜದ್ ಲೋನ್, ಆರೋಗ್ಯ- ವೈದ್ಯಕೀಯ ಶಿಕ್ಷಣ ಖಾತೆಯ ಆಕಾಂಕ್ಷಿಯಾಗಿದ್ದರು ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


