ಉರುಸ್ ಆಚರಣೆಗೆ ರಾಷ್ಟ್ರೀಯ ರಜೆ ಘೋಷಣೆ ಮಾಡಿ: ಪ್ರಧಾನಿಗೆ ಸೂಫಿ ಸಮಿತಿಯ ಪತ್ರ
ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾದ ಉರುಸ್ ಕಾರ್ಯಕ್ರಮದ ದಿನದಂದು ರಾಷ್ಟ್ರೀಯ ರಜೆ ಘೋಷಿಸಬೇಕೆಂದು ಸೂಫಿ ಸಮಿತಿ ಮನವಿ ಮಾಡಿದೆ.

ಅಜ್ಮೀರ್: ಅಜ್ಮೀರ್ ದರ್ಗಾಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿರುವ ಸೂಫಿ ಸಮಿತಿ, ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾದ ಉರುಸ್ ಕಾರ್ಯಕ್ರಮದ ದಿನದಂದು ರಾಷ್ಟ್ರೀಯ ರಜೆ ಘೋಷಿಸಬೇಕೆಂದು ಮನವಿ ಮಾಡಿದೆ.
ದರ್ಗಾ ಸಮಿತಿಯ ಅಧ್ಯಕ್ಷ ಅಸರ್ ಅಹ್ಮದ್ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಏ.9 ರಂದು ಅಜ್ಮೀರ್ ದರ್ಗಾದಲ್ಲಿ ಪ್ರಾರಂಭವಾಗಲಿರುವ ಉರುಸ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದ್ದು, ಉರುಸ್ ಆಚರಣೆಯಂದು ರಾಷ್ಟ್ರೀಯ ರಜೆ ಘೋಷಿಸಬೇಕೆಂದು ಮನವಿ ಮಾಡಿದ್ದಾರೆ.
ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾದ ವಾರ್ಷಿಕ ಉರುಸ್ ಕಾರ್ಯಕ್ರಮದ ಅಂಗವಾಗಿ 1989 ಹಾಗೂ 2012 ರಲ್ಲಿ ಭಾರತ ಸರ್ಕಾರ ಅಂಚೆಚೀಟಿ (ಪೋಸ್ಟಲ್ ಸ್ಟಾಂಪ್) ನ್ನು ಬಿಡುಗಡೆ ಮಾಡಿದೆ. ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರಿಗೆ ಗೌರವ ಸೂಚಿಸಲು ದೇಶದ ಹಿಂದಿನ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ಅನೇಕ ಗಣ್ಯರು ಅಜ್ಮೀರ್ ದರ್ಗಾಗೆ ಭೇಟಿ ನೀಡಿದ್ದಾರೆ ಎಂದು ಅಸರ್ ಅಹ್ಮದ್ ಖಾನ್ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಉರುಸ್ ಆಚರಣೆಯ ದಿನದಂದು ರಾಷ್ಟ್ರೀಯ ರಜೆ ಘೋಷಣೆ ಮಾಡಬೇಕೆಂದು ಅಸರ್ ಅಹ್ಮದ್ ಖಾನ್ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


