ದೇಶ

'ಭಾರತ್ ಮಾತಾ ಕಿ ಜೈ' ಹೇಳುವುದರಿಂದ ನೀರಿನ ಸಮಸ್ಯೆ ಪರಿಹಾರವಾಗಲ್ಲ: ಶಿವಸೇನೆ

ಮಹಾರಾಷ್ಟ್ರದಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಿರುವ ಆಡಳಿತರೂಢ ಮಿತ್ರ ಶಿವಸೇನೆ, ಭಾರತ ಮಾತಾ ಕಿ ಜೈ ಘೋಷಣೆ...

'ಭಾರತ್ ಮಾತಾ ಕಿ ಜೈ' ಹೇಳುವುದರಿಂದ ನೀರಿನ ಸಮಸ್ಯೆ ಪರಿಹಾರವಾಗಲ್ಲ: ಶಿವಸೇನೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
Published On :
ಮುಂಬೈ: ಮಹಾರಾಷ್ಟ್ರದಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಿರುವ ಆಡಳಿತರೂಢ ಮಿತ್ರ ಶಿವಸೇನೆ, ಭಾರತ ಮಾತಾ ಕಿ ಜೈ ಘೋಷಣೆ ಕೂಗುವುದರಿಂದ ರಾಜ್ಯದಲ್ಲಿ ನೀರಿನ ಸಮಸ್ಯೆ ಪರಿಹಾರವಲ್ಲ ಎಂದು ಗುರುವಾರ ಹೇಳಿದೆ.
ಬರ ಪರಿಸ್ಥಿತಿ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದಿರುವ ಶಿವಸೇನೆ, ರಾಜ್ಯದಲ್ಲಿ ತೀವ್ರ ಬರದಿಂದಾಗಿ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ. ಹೀಗಾಗಿ ಬರ ಪರಿಸ್ಥಿತಿ ನಿಯಂತ್ರಿಸಲು ಸರ್ಕಾರ ಹೆಚ್ಚು ಆದ್ಯತೆ ನೀಡಬೇಕು ಎಂದು ಪಕ್ಷದ ಮುಖವಾಡಿ ಸಾಮ್ನಾದ ಸಂಪಾದಕೀಯದಲ್ಲಿ ಬರೆದುಕೊಂಡಿದೆ.
'ನಾನು ಭಾರತ್ ಮಾತಾ ಕಿ ಜೈ ಹೇಳುವುದನ್ನು ನಿಲ್ಲಿಸುವುದಿಲ್ಲ. ಇದಕ್ಕಾಗಿ ನಾನು ಕುರ್ಚಿ ಕಳೆದುಕೊಳ್ಳಲು ಸಿದ್ಧ' ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ. ಆದರೆ ಅದರ ಬದಲು ಅವರು ರಾಜ್ಯದಲ್ಲಿ ನೀರಿನ ಸಮಸ್ಯೆ ಪರಿಹರಿಸದಿದ್ದರೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಹೇಳಬೇಕಿತ್ತು ಎಂದು ಸಾಮ್ನಾ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.