ದೇಶ

ಎನ್ಐಟಿ ಘರ್ಷಣೆ: ತನಿಖೆಗೆ ಜಮ್ಮ ಮತ್ತು ಕಾಶ್ಮೀರ ಸರ್ಕಾರ ಆದೇಶ

ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್​ಐಟಿ) ಕ್ಯಾಂಪಸ್ ನಲ್ಲಿ ನಡೆದ ಘರ್ಷಣೆ ಕುರಿತು ರಾಜ್ಯ ಸರ್ಕಾರ ತನಿಖೆಗೆ...

ಎನ್ಐಟಿ ಘರ್ಷಣೆ: ತನಿಖೆಗೆ ಜಮ್ಮ ಮತ್ತು ಕಾಶ್ಮೀರ ಸರ್ಕಾರ ಆದೇಶ
ನಿರ್ಮಲ್ ಸಿಂಗ್
Published On :
ಶ್ರೀನಗರ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್​ಐಟಿ) ಕ್ಯಾಂಪಸ್ ನಲ್ಲಿ ನಡೆದ ಘರ್ಷಣೆ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.
ವಿಶ್ವಕಪ್ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ವೆಸ್ಟ್ ಇಂಡೀಸ್ ಜಯಗಳಿಸಿದ ವೇಳೆ ನಡೆದ ಸಂಭ್ರಮಾಚರಣೆ ಸಂದರ್ಭ ಸ್ಥಳೀಯ ಮತ್ತು ಹೊರಗಿನ ವಿದ್ಯಾಥಿಗಳ ಮಧ್ಯೆ ಸಂಭವಿಸಿದ ಘರ್ಷಣೆಯಿಂದ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮೂವರು ಸದಸ್ಯರ ತಂಡ ಎನ್ಐಟಿಗೆ ಭೇಟಿ ನೀಡಿತ್ತು.
ಈ ಪ್ರಕರಣ ಮೆಹಬೂಬ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ನೂತನ ಸರ್ಕಾರಕ್ಕೆ ದೊಡ್ಡ ಸವಾಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ, ಎನ್ ಐಟಿ ಕ್ಯಾಂಪಸ್ ನಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ತಡೆಯುವ ಕುರಿತು ಮೆಹಬೂಬ ಮುಫ್ತಿ ಅವರೊಂದಿಗೆ ಮಾತುಕತೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಘಟನೆ ಕಾಶ್ಮೀರ ಸರ್ಕಾರ ತನಿಖೆಗೆ ಆದೇಶಿಸಿದೆ.
ಕಳೆದ ವಾರ ವಿಶ್ವ ಕಪ್‌ ಸೆಮಿ ಫೈನಲ್‌ ಪಂದ್ಯದಲ್ಲಿ ಭಾರತ, ವೆಸ್ಟ್‌ ಇಂಡೀಸ್‌ ತಂಡದೆದುರು ಪರಾಭವಗೊಂಡದ್ದನ್ನು ಅನುಸರಿಸಿ ಶ್ರೀನಗರದ ಎನ್‌ಐಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಗುಂಪು ಪರಸ್ಪರ ಹೊಡೆದಾಡಿಕೊಂಡ ಕಾರಣ ತೀವ್ರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.