ಎನ್ ಐಟಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಪ್ರಹಾರ: ಇಂದು ಜಮ್ಮು ಬಂದ್ ಗೆ ಕರೆ
ಎನ್ ಐಟಿಯ ಹೊರಗಿನ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಕ್ರಮವಾಗಿ ನಡೆಸಿರುವ ಹಲ್ಲೆಯನ್ನು ಖಂಡಿಸಿ ಜೆಕೆಎನ್ ಪಿಪಿ, ಜೆಪಿಪಿಎಫ್ ಮತ್ತು...

ಶ್ರೀನಗರ: ಎನ್ ಐಟಿಯ ಹೊರಗಿನ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಕ್ರಮವಾಗಿ ನಡೆಸಿರುವ ಹಲ್ಲೆಯನ್ನು ಖಂಡಿಸಿ ಜೆಕೆಎನ್ ಪಿಪಿ, ಜೆಪಿಪಿಎಫ್ ಮತ್ತು ಶ್ರೀ ರಾಮ ಸೇನೆ ಸೇರಿದಂತೆ ಹಲವು ಸಂಘಟನೆಗಳು ಗುರುವಾರ ಜಮ್ಮು ಬಂದ್ ಗೆ ಕರೆ ನೀಡಿವೆ.
ಬಂದ್ ಕುರಿತು ಮಾಹಿತಿ ನೀಡಿದ ಜಮ್ಮು ಪ್ರಾಂತ್ಯ ಜನರ ವೇದಿಕೆ(ಜೆಪಿಪಿಎಫ್)ಯ ಕಾರ್ಯಕಾರಿ ಅಧ್ಯಕ್ಷ ಎಂ.ಎಸ್. ಕಟೋಚ್, ಶ್ರೀನಗರದ ಎನ್ ಐಟಿ ವಿದ್ಯಾಲಯದಲ್ಲಿ ಅಧ್ಯಯನ ನಡೆಸುತ್ತಿರುವ ಹೊರಗಿನ ಭಾಗದ ವಿದ್ಯಾರ್ಥಿಗಳಿಗೆ ರಕ್ಷಣೆ ಕೊಡಬೇಕೆಂದು ಜಮ್ಮು ವಾಸಿಗಳಿಗೆ ಮನವಿ ಮಾಡಿದ್ದಾರೆ.
ರಾಷ್ಟ್ರೀಯವಾದಿ ಪಡೆಗಳ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡುವ ಮೂಲಕ ಶ್ರೀನಗರದ ಎನ್ಐಟಿಯಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ಸರ್ಕಾರ ಪ್ರೋತ್ಸಾಹಿಸುತ್ತದೆ ಎಂದು ಜೆಪಿಪಿಎಫ್ ಸಂಘಟನೆ ಆರೋಪಿಸಿದೆ.
ರಾಜ್ಯ ಸರ್ಕಾರ ಜನರಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುತ್ತಿದೆ. ಶ್ರೀನಗರದ ಎನ್ಐಟಿಯ ಹೊರರಾಜ್ಯಗಳ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿಪ್ರಹಾರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಸಂಘಟನೆ, ಇದರಿಂದ ಬೇರೆ ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತದೆ. ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಗೆ ಭದ್ರತೆ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ.
ಮೊನ್ನೆ ಟ್ವಂಟಿ 20 ಕ್ರಿಕೆಟ್ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡ ಸೋತಿದ್ದಕ್ಕೆ ಕಾಲೇಜು ಕ್ಯಾಂಪಸ್ ನಲ್ಲಿ ಸಂಭ್ರಮಾಚರಣೆ ಮಾಡಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


