ಎನ್ಐಟಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಕೋಮು ಘಟನೆ ಎಂಬಂತೆ ಬಿಂಬಿಸಲಾಗುತ್ತಿದೆ: ಮೆಹಬೂಬಾ ಮುಫ್ತಿ
ಅನಾವಶ್ಯಕವಾಗಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ ಕಾಶ್ಮೀರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀನಗರ ಎನ್ ಐಟಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಶ್ರೀನಗರ: ಅನಾವಶ್ಯಕವಾಗಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ ಕಾಶ್ಮೀರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀನಗರ ಎನ್ ಐಟಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶನಿವಾರವೂ ಮುಂದುವರೆದಿದೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ರಾಜ್ಯ ಸರ್ಕಾರ ನಡೆಸಿದ ಮಾತುಕತೆ ಫಲಪ್ರದವಾಗದೆ ಮನವೊಲಿಕೆ ಯತ್ನ ವಿಫಲವಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಸ್ಥಳೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಮೆಹಬೂಬಾ ಮುಫ್ತಿ, ಎನ್ಐಟಿ ವಿದ್ಯಾರ್ಥಿಗಳ ಪ್ರತಿಭಟನೆ ಚರ್ಚೆಯ ವಿಷಯವೇ ಅಲ್ಲ. ಆದರೂ ಈ ಘಟನೆಯನ್ನು ಕೋಮು ಘಟನೆ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಎನ್ಐಟಿ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರೊಂದಿಗೂ ಮಾತನಾಡಿದ್ದು, ಅನಾವಶ್ಯಕವಾಗಿ ಘಟನೆಯನ್ನು ಕೋಮು ಘಟನೆ ಎಂಬಂತೆ ಬಿಂಬಿಸಲಾಗುತ್ತಿದೆ ಎಂಬ ವಿಷಯವನ್ನು ತಿಳಿಸಿರುವುದಾಗಿ ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ. ಎನ್ಐಟಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊರ ರಾಜ್ಯಗಳ ವಿದ್ಯಾರ್ಥಿಗಳು ಜಮ್ಮು-ಕಾಶ್ಮೀರದಿಂದ ಬೇರೆಡೆಗೆ ಸ್ಥಳಾಂತರಗೊಳ್ಳಲು ಇಚ್ಛಿಸುತ್ತಿದ್ದರು ಎಂದು ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


