ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಮೇಲೆ ಶೂ ಎಸೆತ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಗುರುತು ತಿಳಿಯದ ಅನಾಮಿಕ ವ್ಯಕ್ತಿಯೋರ್ವ ಶೂ ಎಸೆದ ಘಟನೆ ದೆಹಲಿಯಲ್ಲಿ ನಡೆದಿದೆ..

ದೆಹಲಿ ಸಿಎಂ ಕೇಜ್ರಿವಾಲ್ ಮೇಲೆ ಶೂ ಎಸೆತ!
ದೆಹಲಿ ಸಿಎಂ ಮೇಲೆ ಶೂ ಎಸೆತ
Published On :

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಗುರುತು ತಿಳಿಯದ ಅನಾಮಿಕ ವ್ಯಕ್ತಿಯೋರ್ವ ಶೂ ಎಸೆದ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯಲ್ಲಿ ಸಮ-ಬೆಸ ಸಂಖ್ಯೆ ಯೋಜನೆ ಕುರಿತಂತೆ ಸರ್ಕಾರದ ವತಿಯಿಂದ ನಡೆಯುತ್ತಿದ್ದ ಸುದ್ದಿಗೋಷ್ಠಿ ವೇಳೆ ಕೇಜ್ರಿವಾಲ್ ಮಾತನಾಡುತ್ತಿದ್ದಾಗ, ಏಕಾಏಕಿ ಅವರತ್ತ  ವ್ಯಕ್ತಿಯೋರ್ವ ಶೂ ಎಸೆದಿದ್ದಾನೆ. ಅಲ್ಲದೆ ಕೆಲ ಸಿಡಿಗಳನ್ನು ಕೂಡ ಎಸೆದು ದೆಹಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಕೂಡಲೇ ಎಚ್ಚೆತ್ತ ಆಪ್ ಕಾರ್ಯಕರ್ತರು ಆ  ವ್ಯಕ್ತಿಯನ್ನು ಹೊರಗೆಳೆದುಕೊಂಡು ಹೋಗಿ ಥಳಿಸಿ, ಹೊರ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಶೂ ಎಸೆದ ವ್ಯಕ್ತಿ ಘೋಷಣೆ ವೇಳೆ ತನ್ನನ್ನು ತಾನು ಆಮ್ ಆದ್ಮಿ ಸೇನೆಯ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಇದೇ ಏಪ್ರಿಲ್ 15ರಿಂದ ದೆಹಲಿಯಲ್ಲಿ  ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಆರಂಭವಾಗಲಿದ್ದು, ಈ ಬಗ್ಗೆ ಮಾಹಿತಿ ನೀಡಲು ಕೇಜ್ರಿವಾಲ್ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ಶೂಎಸೆತ ಘಟನೆ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.