ವಿಶ್ವಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ವಿಶ್ವಸಂಸ್ಥೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಅಚರಿಸಲು ನಿರ್ಧರಿಸಲಾಗಿದೆ...

ವಿಶ್ವಸಂಸ್ಥೆ: ವಿಶ್ವಸಂಸ್ಥೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಅಚರಿಸಲು ನಿರ್ಧರಿಸಲಾಗಿದೆ.
ಸುಸ್ಥಿರ ಅಭಿವೃದ್ಧಿ ಸಾಧನೆಗಾಗಿ ಅಸಮಾನತೆಯ ಎದುರಿಸುವ ಗುರಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಕಲ್ಪನಾ ಸರೋಜ್ ಫೌಂಡೇಷನ್ ನೇತೃತ್ವದಲ್ಲಿ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಇದೇ ಏಪ್ರಿಲ್ 13 ಅಂದರೆ ಅಂಬೇಡ್ಕರ್ ಅವರ ಜನ್ಮ ದಿನಕ್ಕೂ ಒಂದು ದಿನ ಮುಂಚಿತವಾಗಿ ಅವರ ಜಯಂತಿ ಆಚರಣೆ ಮಾಡಲು ವಿಶ್ವಸಂಸ್ಥೆಯ ಸದಸ್ಯರು ನಿರ್ಧರಿಸಿದ್ದಾರೆ. ಅಲ್ಲದೇ ಈ ವಿಶೇಷ ಸಂದರ್ಭದಲ್ಲಿ ಅಂಬೇಡ್ಕರ್ ಸಿದ್ಧಾಂತಗಳ ಕುರಿತು ವಿಶ್ವಸಂಸ್ಥೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಈ ವಿಚಾರವನ್ನು ಸ್ವತಃ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಅವರು ಟ್ವಿಟರ್ ನಲ್ಲಿ ಹೇಳಿಕೊಂಡಿದ್ದು, ಜಯಂತಿ ಆಚರಣೆ ಭಾರತಕ್ಕೆ ಸಂದ ಗೌರವ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


