ನೇಪಾಳ ಸೇರಿದಂತೆ ಭಾರತದ ಹಲವೆಡೆ ನಡುಗಿದ ಭೂಮಿ
ನೇಪಾಳದ ರಾಜಧಾನಿ ಕಠ್ಮಂಡು ಸೇರಿದಂತೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ..

ನವದೆಹಲಿ: ನೇಪಾಳದ ರಾಜಧಾನಿ ಕಠ್ಮಂಡು ಸೇರಿದಂತೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ.
ರಾಜಧಾನಿ ಕಠ್ಮಂಡುವಿನ ಸಮೀಪದಲ್ಲಿರುವ ಲಲಿತ್ ಪುರ್ ಎಂಬ ಪ್ರದೇಶದಲ್ಲಿ ಭೂಂಕಪನದ ಕೇಂದ್ರ ಬಿಂದು ಎಂದು ತಿಳಿದುಬಂದಿದ್ದು, ಈ ವರೆಗೂ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಇನ್ನು ಭಾರತದ ರಾಜಧಾನಿ ದೆಹಲಿ ಮತ್ತು ಹರ್ಯಾಣದಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತಗೊಂಡ ಜನ ಮನೆಗಳಿಂದ ಹೊರಗೆ ಓಡಿ ಬಂದ ದೃಶ್ಯಗಳು ಸಾಮಾನ್ಯವಾಗಿತ್ತು.
ವರ್ಷಗಳ ಹಿಂದೆ ಇದೇ ನೇಪಾಳದಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪನ ಸುಮಾರು 9 ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದರು. ಈ ಕಹಿ ನೆನಪು ಜನರ ಮನಸ್ಸಿನಲ್ಲಿ ಹಸಿರಾಗಿರುವಾಗಲೇ ಮತ್ತೆ ಭೂಮಿ ಕಂಪಿಸಿದ್ದು, ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


