ದೆಹಲಿಯ ಸಂಸತ್ ಭವನದಲ್ಲಿ ಅಗ್ನಿ ಆಕಸ್ಮಿಕ
ದೆಹಲಿಯ ಸಂಸತ್ ಭವನದಲ್ಲಿ ಅಗ್ನಿ ಅವಘಡ ಸಂಭವಿಸಿದೆ...

ನವದೆಹಲಿ: ದೆಹಲಿಯ ಸಂಸತ್ ಭವನದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸಂಸತ್ ಭವನದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 212ರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಭವನದಲ್ಲಿ ಅಳವಡಿಸಲಾಗಿರುವ ಹವಾ ನಿಯಂತ್ರಣ ಯಂತ್ರದಲ್ಲುಂಟಾದ ದೋಷದಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಅಗ್ನಿ ಅವಘಡ ವೇಳೆ ಸಂಸತ್ ಭವನದ ನೆಲಮಹಡಿಯಲ್ಲಿ ಜೆಡಿಯು ಸಭೆ ನಡೆಯುತ್ತಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಸಹ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


