ಕೊಲ್ಲಂ ಅಗ್ನಿ ದುರಂತ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಕೇರಳದ ಪುಟ್ಟಿಂಗಲ್ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ಅನಾಹುತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ...

ನವದೆಹಲಿ: ಕೇರಳದ ಪುಟ್ಟಿಂಗಲ್ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ಅನಾಹುತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ.
ಘಟನೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೇರಳ ದೇಗುಲ ಅಗ್ನಿ ಅನಾಹುತವೊಂದು ಆಘಾತವನ್ನುಂಟು ಮಾಡಿದೆ. ಇದೊಂದು ಹೃದಯ ವಿದ್ರಾವಕ ಘಟನೆಯಾಗಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.
ಅಲ್ಲದೆ, ಶೀಘ್ರದಲ್ಲೇ ಕೇರಳ ಭೇಟಿ ನೀಡುವುದಾಗಿ ಹೇಳಿರುವ ಅವರು, ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ಸಿದ್ಧವಿದೆ. ಪ್ರಕರಣ ಸಂಬಂಧ ಕೇಂದ್ರ ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ಹಣವನ್ನು ಪರಿಹಾರವಾಗಿ ನೀಡಲಿದೆ ಎಂದು ಹೇಳಿದ್ದಾರೆ.
ಕೇರಳದತ್ತ ಪ್ರಧಾನಿ ಮೋದಿ ಪ್ರಯಾಣ ಆರಂಭ
ಕೇರಳ ದೇಗುಲದಲ್ಲಿ ಸಂಭವಿಸಿರುವ ಅಗ್ನಿ ದುರಂತ ಪ್ರಕರಣ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಪ್ರಯಾಣವನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.
ಈಗಾಗಲೇ ವಿಶೇಷ ವಿಮಾನದ ಮೂಲಕ ಪ್ರಯಾಣ ಆರಂಭಿಸಿರುವ ಮೋದಿಯವರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ ನಡ್ಡಾ ಕೂಡ ಸಾಥ್ ನೀಡಿದ್ದು, ಮೋದಿಯವರೊಂದಿಗೆ ನುರಿತ ವೈದ್ಯರ ತಂಡ ಪ್ರಯಾಣ ಆರಂಭಿಸಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


