ಮೋದಿ ಕೇರಳ ಭೇಟಿಯೊಂದು ನೈತಿಕ ಸ್ಥೈರ್ಯವಿದ್ದಂತೆ: ಜಿತೇಂದ್ರ ಸಿಂಗ್
ಕೇರಳದ ಮೂಕಾಂಬಿಕ ದೇಗುಲ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೋದಿಯವರು ಕೇರಳ ರಾಜ್ಯಕ್ಕೆ ಭೇಟಿ ನೀಡಿರುವುದೊಂದು ನೈತಿಕ ಸ್ಥೈರ್ಯವಿದ್ದಂತೆ ಎಂದು ಪ್ರಧಾನಿ ಕಚೇರಿಯ...

ನವದೆಹಲಿ: ಕೇರಳದ ಮೂಕಾಂಬಿಕ ದೇಗುಲದಲ್ಲಿ ನಡೆದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿರುವುದು ನೈತಿಕ ಸ್ಥೈರ್ಯವಿದ್ದಂತೆ ಎಂದು ಪ್ರಧಾನಿ ಕಚೇರಿಯ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಘಟನೆಯೊಂದು ದುರಂತ ಅವಘಡವಾಗಿದ್ದು. ದುರಂತಕ್ಕೆ ಇಡೀ ದೇಶವೇ ಸಂತಾಪವನ್ನು ಸೂಚಿಸುತ್ತಿದೆ. ಪ್ರಧಾನಮಂತ್ರಿ ಮೋದಿ ಕೂಡ ಶೀಘ್ರಗತಿಯಲ್ಲಿ ಸ್ಪಂದಿಸಿದ್ದಾರೆಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸಮಯ ವ್ಯರ್ಥ ಮಾಡದೇ, ದೈಹಿಕ, ಭಾವನಾತ್ಮಕವಾಗಿ ಕೇರಳಕ್ಕೆ ಸ್ಪಂದಿಸುತ್ತಿದ್ದಾರೆ. ಸಹಾಯಕ್ಕಾಗಿ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಗೃಹ ಸಚಿವಾಲಯ ಹಾಗೂ ಇತರೆ ಸಂಬಂಧಿತ ಸಚಿವಾಲಯಗಳು ಕ್ರಮ ಕೈಗೊಂಡಿವೆ. ಅಲ್ಲದೆ ಶೀಘ್ರದಲ್ಲಿಯೇ ಪ್ರಧಾನಿ ಮೋದಿ ಸ್ವತಃ ಕೇರಳಕ್ಕೆ ಭೇಟಿ ನೀಡಿದ್ದಾರೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


