2ನೇ ಹಂತದ ಚುನಾವಣೆ: ಪಶ್ಚಿಮ ಬಂಗಾಳ ಶೇ. 20, ಅಸ್ಸಾಂ ಶೇ.15.90 ರಷ್ಟು ಮತದಾನ
ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಸೋಮವಾರ ಎರಡನೇ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಈ ವರೆಗೂ ಪಶ್ಚಿಮ ಬಂಗಾಳದಲ್ಲಿ ಶೇ.20, ಅಸ್ಸಾನಲ್ಲಿ ಶೇ.15.90...

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಸೋಮವಾರ ಎರಡನೇ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಈ ವರೆಗೂ ಪಶ್ಚಿಮ ಬಂಗಾಳದಲ್ಲಿ ಶೇ.20, ಅಸ್ಸಾನಲ್ಲಿ ಶೇ.15.90 ರಷ್ಟು ಮತದಾನವಾಗಿರುವುದಾಗಿ ತಿಳಿದುಬಂದಿದೆ.
ಪಶ್ಚಿಮ ಬಂಗಾಳದ 31. ಅಸ್ಸಾಂನ 61 ಕ್ಷೇತ್ರಗಳಿಗೆ 2ನೇ ಹಂತದ ವಿಧಾನಸಭೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಚುನಾವಣಾ ಪ್ರಕ್ರಿಯೆ ಸುಮಾರು 1 ತಿಂಗಳ ಕಾಲ ನಡೆಯಲಿದೆ. ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ್, ಬಂಕುರಾ ಮತ್ತು ಬುರ್ದ್ವಾನ್ ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
ಪಶ್ಚಿಮ ಬಂಗಾಳದಲ್ಲಿನ 18 ಕ್ಷೇತ್ರಗಳಲ್ಲಿ 133 ಅಭ್ಯರ್ಥಿಗಳು ಕಣದಲ್ಲಿಳಿದಿದ್ದು, ಪಶ್ಚಿಮ ಬಂಗಾಳದಲ್ಲಿ ಒಟ್ಟು 6 ಹಂತಗಳಲ್ಲಿ ಚುನಾವಣೆ ನಡೆಸಲಿದೆ. ಅಸ್ಸಾಂ ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ ಪೂರ್ಣಗೊಳ್ಳಲಿದೆ.
70 ಲಕ್ಷಕ್ಕೂ ಹೆಚ್ಚು ಜನರು ಮತದಾನದಲ್ಲಿ ಭಾಗವಿಸುತ್ತಿದ್ದು, ಚುನಾವಣೆ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ನಡೆಯಲಿದೆ.
ಪಶ್ಚಿಮ ಬಂಗಾಳದಲ್ಲಿನ 31 ಕ್ಷೇತ್ರಗಳಲ್ಲಿ 21 ಮಹಿಳೆಯರು ಸೇರಿ 163 ಅಭ್ಯರ್ಥಿಗಳು ಕಣದಲ್ಲಿಳಿದಿದ್ದು, ಪಶ್ಚಿಮ ಬಂಗಾಳದಲ್ಲಿ ಒಟ್ಟು 6 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಸ್ಸಾಂ ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ ಪೂರ್ಣಗೊಳ್ಳಲಿದೆ.
2011ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷದ ಜೊತೆ ಕಾಂಗ್ರೆಸ್ ಕೈ ಜೋಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ರಾಜ್ಯದಲ್ಲಿ 34 ವರ್ಷಗಳ ಎಡಪಕ್ಷಗಳ ಆಳ್ವಿಕೆ ಅಂತಿಮಗೊಂಡಿತ್ತು. ನಂತರ ದಿನಗಳಲ್ಲಿ ಟಿಎಂಸಿ ಪಕ್ಷದ ಜತೆಗಿನ ಸಂಬಂಧವನ್ನು ಕಾಂಗ್ರೆಸ್ ಕಡಿದುಕೊಂಡಿತ್ತು. ಇದೀಗ ಎಡಪಕ್ಷಗಳ ಜೊತೆ ಕೈಜೋಡಿಸಿರುವ ಕಾಂಗ್ರೆಸ ಪಕ್ಷ ಮೈತ್ರಿ ಮಾಡಿಕೊಂಡು ಮಮತಾ ಬ್ಯಾನರ್ಜಿಯವರನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


