ದೇಶ

ಉಕ್ರೇನ್ ನಲ್ಲಿ ಕೊಲೆಯಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಅಗತ್ಯ ನೆರವು: ಅಖಿಲೇಶ್ ಯಾದವ್

ಉಕ್ರೇನ್ ನಲ್ಲಿ ಕೊಲೆಯಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಘೋಷಿಸಿದ್ದಾರೆ..

ಉಕ್ರೇನ್ ನಲ್ಲಿ ಕೊಲೆಯಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಅಗತ್ಯ ನೆರವು: ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Published On :

ಲಕ್ನೋ: ಉಕ್ರೇನ್ ನಲ್ಲಿ ಕೊಲೆಯಾದ ಭಾರತೀಯ ವಿದ್ಯಾರ್ಥಿಗಳ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಘೋಷಿಸಿದ್ದಾರೆ,

ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವ ಅಖಿಲೇಶ್ ಯಾದವ್ ಎಲ್ಲಾ ರೀತಿಯ ನೆರವುಗಳನ್ನು ಎಷ್ಟು ಸಾಧ್ಯವೋ ಅಷ್ಟು ಪ್ರಮಾಣದಲ್ಲಿ ನೀಡುವಂತೆ ಆದೇಶಿಸಿದ್ದಾರೆ.

ಭಾರತೀಯ ರಾಯಭಾರ ಕಚೇರಿಯ ನೆರವು ಪಡೆದು, ಶವಗಳನ್ನು ಭಾರತಕ್ಕೆ ವಾಪಸ್ ತರಲು ಅಗತ್ಯ ಸೌಲಭ್ಯ ಒದಗಿಸುವಂತೆ ಎಲ್ಲಾ ರೀತಿಯ ಸಹಾಯ ನೀಡುವಂತೆ ತಿಳಿಸಿದ್ದಾರೆ.

ಏಪ್ರಿಲ್ 10 ರಂದು ಮುಜಾಫರ್ ನಗರದ ಪ್ರಣವ್  ಸಾಂಡಿಯಾಲಾ ಮತ್ತು ಘಾಜಿಯಾಬಾದ್ ನ ಅಂಕುರ್ ಸಿಂಗ್ ರನ್ನು ಉಕ್ರೇನ್ ನಲ್ಲಿ ಇರಿದು ಕೊಲ್ಲಲಾಗಿತ್ತು, ತೀವ್ರ ಗಾಯಗೊಂಡಿರುವ ಆಗ್ರಾದ ಇಂದ್ರಜೀತ್ ಸಿಂಗ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.