ಕೇರಳ ದೇವಾಲಯದಲ್ಲಿ ರಾತ್ರಿವೇಳೆ ಪಟಾಕಿಗೆ ಹೈಕೋರ್ಟ್ ನಿಷೇಧ
ಕೇರಳದ ಎಲ್ಲಾ ದೇವಾಲಯಗಳಲ್ಲಿ ರಾತ್ರಿ ವೇಳೆ ದೊಡ್ಡ ಪ್ರಮಾಣದ ಸಿಡಿಮದ್ದುಗಳನ್ನು ಸುಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ಮಂಗಳವಾರ....

Published On :
ತಿರುವನಂತಪುರಂ: ಕೇರಳದ ಎಲ್ಲಾ ದೇವಾಲಯಗಳಲ್ಲಿ ರಾತ್ರಿ ವೇಳೆ ದೊಡ್ಡ ಪ್ರಮಾಣದ ಸಿಡಿಮದ್ದುಗಳನ್ನು ಸುಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
ಅತ್ಯಧಿಕ ಸದ್ದಿನ ಸುಡುಮದ್ದುಗಳನ್ನು ನಿಷೇಧಿಸುವಂತೆ ಕೋರಿ ಜಸ್ಟಿಸ್ ಚಿದಂಬರೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಭಾರಿ ಅಗ್ನಿ ದುರಂತದೊಂದಿಗೆ ಪರ್ಯವಸಾನಗೊಂಡ ಪುಟ್ಟಿಂಗಲ್ ದೇವಾಲಯದಲ್ಲಿ ಭಾರಿ ಪ್ರಮಾಣದಲ್ಲಿ ಸಿಡಿಮದ್ದು ಪ್ರದರ್ಶನಕ್ಕೆ ಅನುವು ಮಾಡಿಕೊಟ್ಟದ್ದಕ್ಕಾಗಿ ಹೈಕೋರ್ಟ್ ಒಮನ್ ಚಾಂಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ದೇವಾಲಯಗಳ ಅವರಣದಲ್ಲಿ ಸಿಡಿಮದ್ದು ಸಿಡಿಸಲು ಅನುಮತಿ ಕೊಡಲಾಗುವುದಿಲ್ಲ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದಾಗ ‘ಅನುಮತಿ ಇಲ್ಲದೇ ಇದ್ದಾಗ ಸಿಡಿಮದ್ದು ಸಿಡಿಸುವುದು ಹೇಗೆ?’ ಎಂದು ಕೋರ್ಟ್ ಸರ್ಕಾರವನ್ನು ಪ್ರಶ್ನಿಸಿತು. ಸಿಡಿಮದ್ದು ಸಿಡಿಸುವ ಹೊತ್ತಿನಲ್ಲಿ ದೇವಸ್ಥಾನದ ಆವರಣದಲ್ಲಿ ಸಂಗ್ರಹಿಸಲಾಗಿದ್ದ ಸಿಡಿಮದ್ದು ಸಂಗ್ರಹಕ್ಕೆ ಬೆಂಕಿ ತಗುಲಿ ಸಂಭವಿಸಿದ ಭಾರಿ ಅಗ್ನಿದುರಂತದಲ್ಲಿ 110ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಈ ಮಧ್ಯೆ ಇಂದು ಬೆಳಗಿನ ಜಾವ ಶರಣಾಗತರಾದ ದೇವಾಲಯದ ಆಡಳಿತ ಮಂಡಳಿಯ 7 ಸದಸ್ಯರು ಸೇರಿದಂತೆ ಒಟ್ಟು 13 ಮಂದಿಯನ್ನು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


