ದೇಶದ ಆಡಳಿತ ನಡೆಸುತ್ತಿರುವುದು ಬಿಜೆಪಿಯಲ್ಲ ಆರ್'ಎಸ್'ಎಸ್: ರಾಹುಲ್ ಗಾಂಧಿ
ದೇಶದ ಆಡಳಿತ ನಡೆಸುತ್ತಿರುವುದು ಆರ್'ಎಸ್'ಎಸ್ ಹೊರತು ಬಿಜೆಪಿಯಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ...

ನಾಗ್ಪುರ (ಮಹಾರಾಷ್ಟ್ರ): ದೇಶದ ಆಡಳಿತ ನಡೆಸುತ್ತಿರುವುದು ಆರ್'ಎಸ್'ಎಸ್ ಹೊರತು ಬಿಜೆಪಿಯಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ.
ಮುಂಬರುವ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆಯ ಅಂಗವಾಗಿ ರ್ಯಾಲಿಯೊಂದರಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಬಿಜೆಪಿಯವರು ಅಧಿಕಾರಕ್ಕೆ ಬಂದಾಗಿನಿಂದ ಅವರ ಆಡಳಿತಶಾಹಿಯನ್ನು ಗಮನಿಸಿ, ಇತ್ತೀಚಿನ ದಿನಗಳಲ್ಲಿ ಸಚಿವರು ದೇಶವನ್ನು ನಡೆಸುತ್ತಿಲ್ಲ. ಆರ್'ಎಸ್'ಎಸ್ ನೇಮಕ ಮಾಡಿಕೊಂಡಿರುವ ಸಚಿವರು ದೇಶವನ್ನು ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರು ನನ್ನ ವಿರುದ್ಧ ದಾಳಿ ನಡೆಸುತ್ತಾರೆ. ಏಕೆಂದರೆ, ಅವರಿಗೆ ಗೊತ್ತಿದೆ ಯಾವುದೇ ಕಾರಣಕ್ಕೂ ಆರ್'ಎಸ್'ಎಸ್ ಸಿದ್ಧಾಂತಕ್ಕೆ ನಾನು ಬಗ್ಗುವುದಿಲ್ಲ ಎಂಬುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


