ದೇಶ

ಕಾಶ್ಮೀರದಲ್ಲಿ ಗುಂಡಿನ ದಾಳಿ: ತನಿಖೆಗೆ ಆದೇಶಿಸಿದ ಸೇನೆ

ಕಾಶ್ಮೀರದ ಹಂದ್ವಾರದಲ್ಲಿ ಯೋಧರು ನಡೆಸಿದ ಗುಂಡಿನ ದಾಳಿ ಪ್ರಕರಣವನ್ನು ತನಿಖೆ ನಡೆಸುವಂತೆ ಸೇನೆ ಬುಧವಾರ ಆದೇಶಿಸಿದೆ ಎಂದು ತಿಳಿದುಬಂದಿದೆ...

ಕಾಶ್ಮೀರದಲ್ಲಿ ಗುಂಡಿನ ದಾಳಿ: ತನಿಖೆಗೆ ಆದೇಶಿಸಿದ ಸೇನೆ
ಸಂಗ್ರಹ ಚಿತ್ರ
Published On :

ಶ್ರೀನಗರ: ಕಾಶ್ಮೀರದ ಹಂದ್ವಾರದಲ್ಲಿ ಯೋಧರು ನಡೆಸಿದ ಗುಂಡಿನ ದಾಳಿ ಪ್ರಕರಣವನ್ನು ತನಿಖೆ ನಡೆಸುವಂತೆ ಸೇನೆ ಬುಧವಾರ ಆದೇಶಿಸಿದೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ ಅವರೊಂದಿಗೆ ಮಾತುಕತೆ ನಡೆಸಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಘಟನೆಯ ಸಂಪೂರ್ಣ ವರದಿಯನ್ನು ಪಡೆದುಕೊಂಡಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿ ಅವರು, ಈ ರೀತಿಯ ಘಟನೆಗಳು ರಾಜ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸಲು ಸರ್ಕಾರ ಮಾಡುತ್ತಿರುವ ಎಲ್ಲಾ ಪರಿಶ್ರಮಗಳು ವಿಫಲವಾಗಲಿದೆ. ಈ ರೀತಿಯ ಘಟನೆಗಳು ಮರುಕಳಿಸಬಾರದು. ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರು ಕಠಿಣ ಕ್ರಮಕೊಳ್ಳಬೇಕು. ಸಾರ್ವಜನಿಕರು ಪ್ರತಿಭಟನೆಗಿಳಿದಾಗ ರಕ್ಷಣೆ ನೀಡುವವರು ಸಾಕಷ್ಟು ಎಚ್ಚರಿಕೆಯಿಂದ ನಿಭಾಯಿಸಬೇಕು. ಮುಗ್ಧ ಜನರನ್ನು ಕೊಲ್ಲುವುದನ್ನು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಹಂದ್ವಾರದಲ್ಲಿ ಮಹಿಳೆಯೊಬ್ಬರಿಗೆ ಯೋಧನೊಬ್ಬ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಹೇಳಿ ಅಲ್ಲಿನ ಸ್ಥಳೀಯರು ಸೇನೆ ಮೇಲೆ ದಾಳಿ ಮಾಡಿದ್ದರು. ಅಲ್ಲದೆ ಪ್ರತಿಭಟನೆ ನಡೆಸುತ್ತಿದ್ದರು. ಕೆಲವು ಸ್ಥಳೀಯರು ಸೇನಾ ಬಂಕರ್'ಗೆ ಬೆಂಕಿ ಹಚ್ಚಲು ಪ್ರಯತ್ನ ನಡೆಸಿದ್ದರು.

ಈ ವೇಳೆ ಸ್ಥಳದಲ್ಲಿ ಕೆಲವು ಗಂಟೆಗಳ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಸಲುವಾಗಿ ಯೋಧರು ಗುಂಡು ಹಾರಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಮೊಹಮ್ಮದ್ ಇಕ್ಬಾಲ್ ಮತ್ತು ನಯೀಮ್ ಕ್ವಾದಿನ್ ಭಟ್ ಎಂಬ ಇಬ್ಬರು ಯುವಕರಿಗೆ ಗುಂಡು ತಗುಲಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.