ದೇಶ

ನಾಗರಿಕರ ಮೇಲೆ ಗುಂಡಿನ ದಾಳಿ ಪ್ರಕರಣ: ಪರಿಕ್ಕರ್ ನ ಭೇಟಿಯಾದ ಮೆಹಬೂಬ

ಹಂದ್ವಾರ್ ನಲ್ಲಿ ನಾಗರಿಕರ ಮೇಲೆ ಯೋಧರ ಗುಂಡು ಹಾರಿಸಿ ಇಬ್ಬರು ಯುವಕರನ್ನು ಬಲಿ ಪಡೆದ ವಿಷಯಕ್ಕೆ ಸಂಬಂಧಿಸಿದಂತೆ ಜಮ್ಮು ಕಾಶ್ಮೀರದ...

ನಾಗರಿಕರ ಮೇಲೆ ಗುಂಡಿನ ದಾಳಿ ಪ್ರಕರಣ: ಪರಿಕ್ಕರ್ ನ ಭೇಟಿಯಾದ ಮೆಹಬೂಬ
ಮೆಹಬೂಬ ಮುಫ್ತಿ
Published On :
ನವದೆಹಲಿ: ಹಂದ್ವಾರ್ ನಲ್ಲಿ ನಾಗರಿಕರ ಮೇಲೆ ಯೋಧರ ಗುಂಡು ಹಾರಿಸಿ ಇಬ್ಬರು ಯುವಕರನ್ನು ಬಲಿ ಪಡೆದ ವಿಷಯಕ್ಕೆ ಸಂಬಂಧಿಸಿದಂತೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಯುವಕರ ಮೇಲೆ ಗುಂಡು ಹಾರಿಸಿದ ಯೋಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೆಹಬೂಬ ಮುಫ್ತಿ ಪರಿಕ್ಕರ್ ಬಳಿ ಮನವಿ ಮಾಡಿದ್ದಾರೆ. ನಿನ್ನ ನವೆದೆಹಲಿಗೆ ಬಂದಿದ್ದ ಮೆಹಬೂಬ ಮುಫ್ತಿ ಅವರು, ಮನೋಹರ್ ಪರಿಕ್ಕರ್ ಮತ್ತು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ, ಯೋಧರ ಗುಂಡಿನ ದಾಳಿ ಸಂಬಂಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.
ತದ ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮೆಹಬೂಬ ಮುಫ್ತಿ, ಹಂದ್ವಾರದಲ್ಲಿ ನಾಗರಿಕ ಮೇಲೆ ಯೋಧರು ಗುಂಡು ಹಾರಿಸಿದ ಪ್ರಕರಣದ ಬಗ್ಗೆ ಮನೋಹರ್ ಪರಿಕ್ಕರ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಮನೋಹರ್ ಪರಿಕರ್ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.