ದೆಹಲಿ ಮೆಟ್ರೋ ಲೂಟಿ ಪ್ರಕರಣ: ಮಾಜಿ ನೌಕರನ ಬಂಧನ
ರಾಜಧಾನಿ ದೆಹಲಿಯಲ್ಲಿ ನಡೆದ ಮೆಟ್ರೋ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಮಾಜಿ ನೌಕರನೊಬ್ಬನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆದ ಮೆಟ್ರೋ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಮಾಜಿ ನೌಕರನೊಬ್ಬನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಈ ಕುರಿತಂತೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿರುವ ಜಂಟಿ ಆಯುಕ್ತರಾದ ಎಂ.ಕೆ. ಮೀನಾ ಅವರು, ಹಣವನ್ನು ವಶಕ್ಕೆ ಪಡೆದುಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಪ್ರಸ್ತುತ ಬಂಧನಕ್ಕೊಳಪಡಿಸಿರುವವರು ಈ ಹಿಂದೆ ಮೆಟ್ರೋ ಸ್ಟೇಷನ್ ನಲ್ಲಿ ಕಾರ್ಯನಿರ್ವಹಿಸಿದ ನೌಕರನಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಮೆಟ್ರೋ ನಿಲ್ದಾಣದಲ್ಲಿ ನಡೆದ ಲೂಟಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು ಈಗಾಗಲೇ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರು ಮುಖ ಮುಚ್ಚಿಕೊಳ್ಳುವ ಯಾವುದೇ ಮಾಸ್ಕ್, ಬಟ್ಟೆ, ಮಫ್ಲರ್ ಶಸ್ತ್ರಚಿಕಿತ್ಸಾ ಮುಖವಾಡಗಳಾಗಲಿ ಹಾಕಿಕೊಳ್ಳದಂತೆ ಆದೇಶ ಹೊರಡಿಸಿದೆ.
ಕಳೆದೆರಡು ದಿನಗಳ ಹಿಂದಷ್ಟೇ ರಾಜೇಂದರ್ ಮೆಟ್ರೋ ನಿಲ್ದಾಣದ ಟಿಕೆಟ್ ಕೌಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರನೊಬ್ಬನ ಮೇಲೆ ದಾಳಿ ಮಾಡಿದ್ದ ಇಬ್ಬರು ಅನಾಮಧೇಯ ವ್ಯಕ್ತಿಗಳು ನೌಕರನಿಗೆ ಚೂರಿ ಇರಿದು ರು.12 ಲಕ್ಷ ದರೋಡೆ ಮಾಡಿದ್ದರು. ಈ ಘಟನೆಯ ದೃಶ್ಯಾವಳಿಗಳು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಚೂರಿ ಇರಿದ ವ್ಯಕ್ತಿಗಳು ಮುಖಕ್ಕೆ ಯಾವುದೇ ಬಟ್ಟೆಗಳನ್ನು ಧರಿಸಿಲ್ಲದಿದ್ದರೂ, ಮುಖದ ಮೇಲೆ ಕೈಗಳನ್ನಿಟ್ಟುಕೊಂಡು ಮುಖವನ್ನು ಮರೆಮಾಚಿಕೊಂಡು ಪರಾರಿಯಾಗಿದ್ದರು. ಇದೀಗ ಘಟನೆ ಸಂಬಂಧಿಸಿ ಮಾಜಿ ನೌಕರನ್ನೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


