ಎನ್ ಐಟಿ ಸ್ಥಳಾಂತರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಶ್ರೀನಗರದಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯನ್ನು(ಎನ್ ಐಟಿ)ಯನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ...

Published On :
ಜಮ್ಮು: ಶ್ರೀನಗರದಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯನ್ನು(ಎನ್ ಐಟಿ)ಯನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ 300 ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗುತ್ತಾ ಜಮ್ಮುವಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.
ನಿನ್ನೆ ರಾತ್ರಿ ಜಮ್ಮು ಕಾಶ್ಮೀರಕ್ಕೆ ಬಂದ ಹೊರ ರಾಜ್ಯದ ವಿದ್ಯಾರ್ಥಿಗಳು ಇಂದು ಬೆಳಗ್ಗಿನಿಂದಲೇ ಎನ್ ಐಟಿ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೊರ ರಾಜ್ಯ ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವ ಎಲ್ಲಾ ಪ್ರಕರಣವನ್ನು ಕೈಬಿಟ್ಟು, ಎನ್ ಐಟಿಯನ್ನು ಸ್ಥಳಾಂತರಿಸಿ ಎಂದು ಆಗ್ರಹಿಸಿದ್ದಾರೆ.
ಎನ್ ಐಟಿ ಅಧಿಕಾರಿಗಳು ಮತ್ತು ಪೊಲೀಸರು ನಮ್ಮನ್ನು ಕೂಡಿಹಾಕಿದ್ದರು. ಆದಲೆ ನಾವು ತಪ್ಪಿಸಿಕೊಂಡು ಬಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಎನ್ ಐಟಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಜಮ್ಮು ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಇತರೆ ಕಾಲೇಜು ವಿದ್ಯಾರ್ಥಿಗಳು ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


